Friday, May 17, 2024

ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನ: 47.89 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ!

ಬೆಂಗಳೂರು ಗ್ರಾಮಾಂತರ ಜಿಲ್ಲೆ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಪಾನಿಪುರಿ ಜಗಳ ಕೊಲೆಯಲ್ಲಿ ಅಂತ್ಯ!

ಪ್ರಯಾಣಿಕನಿಂದ 47.89 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಸಿಂಗಾಪುರ ಏರ್​ಲೈನ್ಸ್ SQ510 ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನ ಕ್ಯಾಪ್​ನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆ ಪ್ರಯಾಣಿಕನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಪೇಸ್ಟ್ ರೂಪದಲ್ಲಿ 47.89 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದೆ.

ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES