Wednesday, January 22, 2025

ಕರ್ನಾಟಕದ ಬಿರಿಯಾನಿ ತಿಂದು ಭಾರತ್ ಜೋಡೋ ಮಾಡಿದವರು ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ: ಕುಮಾರಸ್ವಾಮಿ ಕಿಡಿ

ಬೆಂಗಳೂರು: ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಮಾಡಿದವರು ಇದೀಗ ವಿಭಜನೆಯ ಮಾತನಾಡುತ್ತಿದ್ದಾರೆ ಎಂದು ಸಂಸದ ಡಿ ಕೆ ಸುರೇಶ್‌ ವಿರುದ್ಧ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಲ್ಲು ಒಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ? ಬಡವರನ್ನು ಲೂಟಿ ಮಾಡಿಕೊಂಡು ಗುಡ್ಡೆ ಹಾಕಿದ್ದಾರೆ. ಅಂಥವರನ್ನು ದೇಶ ಕಟ್ಟು ಅಂತ ಕಳುಹಿಸಿದರೆ ಅವರು ದೇಶ ಕಟ್ಟುತ್ತಾರಾ? ಅವರ ಸಾಮ್ರಾಜ್ಯ ಕಟ್ಟಿಕೊಳ್ಳುತ್ತಾರೆ ಅಷ್ಟೇ ಎಂದು ಕಿಡಿಕಾರಿದ್ದಾರೆ.

ಸಂಸದ ಡಿ ಕೆ ಸುರೇಶ್ ಅವರು ದೇಶ ವಿಭಜನೆ ಬಗ್ಗೆ ಮಾತನಾಡಿ, ಅದಕ್ಕೆ ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ ಮಾಡುತ್ತಿದೆ, ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂಬ ಕಾರಣ ಕೊಟ್ಟಿದ್ದಾರೆ. ಇದು ಅಪ್ರಬುದ್ಧ ಹೇಳಿಕೆ ನೀಡಿದ್ದಾರೆ ಎಂದರು.

ಕೇಂದ್ರ ಸರ್ಕಾರದ ಮನವೊಲಿಸಿ ಹಣ ಪಡೆಯಬೇಕು

ಸಂಘರ್ಷದಿಂದ ನಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರದಿಂದ ಪಡೆಯಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು. ಕೇಂದ್ರ ಸರ್ಕಾರದ ಮನವೊಲಿಸಿ ಹಣ ಪಡೆಯಬೇಕು. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ” ಎಂದು ಕುಟುಕಿದ್ದಾರೆ.

RELATED ARTICLES

Related Articles

TRENDING ARTICLES