Wednesday, January 22, 2025

ಇನ್ಮುಂದೆ 29 ರೂ.ಗೆ ಸಿಗಲಿದೆ ಭಾರತ್ ಬ್ರಾಂಡ್ ಅಕ್ಕಿ

ನವದೆಹಲಿ: ಬೆಲೆ ಏರಿಕೆ ಬಿಸಿಯಿಂದ ಬೇಸತ್ತ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನ ವಾರದಿಂದಲೇ ಭಾರತ್ ಬ್ರ್ಯಾಂಡ್ ಅಕ್ಕಿ ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೇ ಸಗಟು ಖರೀದಿದಾರರು ತಮ್ಮ ಬಳಿ ಹೊಂದಿರುವ ಅಕ್ಕಿ ಸಂಗ್ರಹದ ಪ್ರಮಾಣವನ್ನೂ ಬಹಿರಂಗಪಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಈ ಬಗ್ಗೆ ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸಂಜೀವ್ ಚೋಪ್ರಾ ಮಾತನಾಡಿದ್ದು, ಕಳೆದ ಒಂದು ವರ್ಷದಲ್ಲಿ ಚಿಲ್ಲರೆ ಮತ್ತು ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಶೇ.15ರಷ್ಟು ಹೆಚ್ಚಳವಾಗಿದೆ. ವಿವಿಧ ಮಾದರಿಯ ಅಕ್ಕಿ ರಫ್ತಿನ ಮೇಲೆ ನಿಯಂತ್ರಣ ಹೇರಿದ್ದರೂ ದರ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಕೇಂದ್ರ ಸರ್ಕಾರವೇ ಮುಂದಿನ ವಾರದಿಂದ ಜಾರಿಗೆ ಬರುವಂತೆ ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ ಅಕ್ಕಿಗೆ 29 ರೂ. ನಂತೆ ಮಾರಾಟ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಭಾರತ್ ಬ್ರ್ಯಾಂಡ್ ಗೋದಿ ಹಿಟ್ಟು ಮತ್ತು ಕಡಲೆ ಬೇಳೆ ಮಾರಾಟವಾಗುತ್ತಿದೆ. ಗೋದಿ ಹಿಟ್ಟು ಪ್ರತಿ ಕೆ.ಜಿಗೆ 27.50 ರೂ. ಕಡಲೆ ಬೇಳೆ ಪ್ರತಿ ಕೆ.ಜಿಗೆ 60 ರೂ.ಗಳಿಗೆ ಮಾರಾಟವಾಗುತ್ತಿದೆ. ಇದರೊಂದಿಗೆ ಅಕ್ಕಿಯೂ ಮಾರಾಟವಾಗಲಿದೆ. ಪ್ರತಿ ಕೆಜಿ ಅಕ್ಕಿಗೆ 29 ರೂ. ನಿಗದಿಪಡಿಸಲಾಗಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕೆಟ್‍ಗಳಲ್ಲಿ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

 

RELATED ARTICLES

Related Articles

TRENDING ARTICLES