ಮೈಸೂರು : ವಾಹನಗಳನ್ನು ಅಡ್ಡಗಟ್ಟಿ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ ಖತರ್ನಾಕ್ ಧರೋಡೆಕೋರರನ್ನು ಜಿಲ್ಲೆಯ ಹೆಚ್.ಡಿ ಕೋಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಇಬ್ಬರು ಆರೋಪಿಗಳನ್ನು ಕೋಳಗಾಲದವರು ಎಂದು ತಿಳಿದುಬಂದಿದೆ. ಇವರು ದರೋಡೆ ವೇಳೆ ಜೇಬಲ್ಲಿ ಹಣವಿಲ್ಲದಿದ್ದರೇ ಗೂಗಲ್ ಪೇ ನಲ್ಲಿ ಹಣ ವರ್ಗಾವಣೆ ಮಾಡಿಸಿಕೊಂಡು ಪರಾರಿಯಾಗುತ್ತಿದ್ದರು,
ಇದನ್ನೂ ಓದಿ: ಹಿರಿಯ ರಾಜಕಾರಣಿ ಎಲ್.ಕೆ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ಸರ್ಕಾರ!
ಇದೇ ರೀತಿ, ಮಾನಂದವಾಡಿ ಮುಖ್ಯ ರಸ್ತೆಯಲ್ಲಿ ಲಾರಿ ಅಡ್ಡಗಟ್ಟಿ ಹಣಕ್ಕಾಗಿ ಚಾಲಕನಿಗೆ ಡಿಮ್ಯಾಂಡ್ ಮಾಡಿದ್ದಾರೆ. ಈ ವೇಳೆ ಹಣ ಇಲ್ಲ ಎಂದು ಚಾಲಕ ಹೇಳಿದ್ದಾನೆ. ಬಳಿಕ ಹಣವನ್ನ ಆನ್ ಲೈನ್ ಗೂಗಲ್ ಪೇ ಮೂಲಕ ಹಣ ಕಳಿಸಿಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ.
ಈ ಕುರಿತು ಹೆಚ್,ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆನ್ ಲೈನ್ ಮೂಲಕ ಹಣ ವರ್ಗಾವಣೆ ಜಾಡು ಹಿಡಿದು ಹೊರಟ ಪೊಲೀಸರು ಇಬ್ಬರು ಕಿರಾತಕರನ್ನ ಬಂಧಿಸಿದ್ದಾರೆ. ಮತ್ತಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಸದ್ಯ ಹಣ ವಸೂಲಿ ಮಾಡಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.