Sunday, December 22, 2024

ನಾನು ಬದುಕಿದ್ದೇನೆ ಸತ್ತಿಲ್ಲ : ವಿಡಿಯೋ ಮಾಡಿ ಶಾಕ್ ಕೊಟ್ಟ ಪೂನಂ

ಬೆಂಗಳೂರು: ನಿನ್ನೆಯಷ್ಟೇ ಬಾಲಿವುಡ್ ನಟಿ ಪೂನಂ ಪಾಂಡೆ ಇನ್ಸ್ಟಾದಲ್ಲಿ ಪೂನಂ ಅವರ ಮ್ಯಾನೇಜರ್ ಗರ್ಭಕೋಶ ಕಂಠ ಕ್ಯಾನ್ಸರ್ ನಿಂದಾಗಿ ಪೂನಂ ನಿಧನರಾಗಿದ್ದಾರೆ ಎಂದು ಪೋಸ್ಟ್ ಹಾಕಿ ಇಡೀ ಅಭಿಮಾನಿಗಳಿಗೆ ಶಾಕ್ ನೀಡಿದ್ದರು.

ಪೂನಂ ನಿಧನ ಇಡೀ ದೇಶವೇ ಚರ್ಚೆ ಮಾಡುವಂತೆ ಮಾಡಿತ್ತು. ಪೂನಂ ಸತ್ತಿರುವ ಸಮಾಚಾರದ ಹೊರತಾಗಿ ಬೇರೆ ಯಾವ ಫೋಟೋಗಳು ಆಚೆ ಬರಲಿಲ್ಲ. ಹಾಗಾಗಿ ಸಹಜವಾಗಿಯೇ ಸಾವಿನ ಬಗ್ಗೆ ಅನುಮಾನ ಮೂಡಿತ್ತು.

ವಿಡಿಯೋ ಮೂಲಕ ಬದುಕಿರುವ ಸುದ್ದಿಯನ್ನು ತಿಳಿಸಿದ ಪೂನಂ 

ಇದೀಗ ಪೂನಂ ಬದುಕಿರುವ ಸುದ್ದಿಯನ್ನು ಸ್ವತಃ ಪೂನಂ ಅವರೇ ನೀಡಿದ್ದಾರೆ. ತಾನು ಬದುಕಿದ್ದೇನೆ. ಹಾಗೆ ಮಸೇಜ್ ಮಾಡಲು ಕಾರಣವಿದೆ ಎಂದು ಹೇಳಿದ್ದರು.

 

View this post on Instagram

 

A post shared by Poonam Pandey (@poonampandeyreal)

ಗರ್ಭಕೋಶ ಕಂಠ ಕ್ಯಾನ್ಸರ್ ಕುರಿತಾದ ಜಾಗೃತಿ ಮೂಡಿಸಲು ಹೀಗೆ ಮಾಡಿದ್ದೆ

ಗರ್ಭಕೋಶ ಕಂಠ ಕ್ಯಾನ್ಸರ್ ಕುರಿತಾದ ಜಾಗೃತಿ ಮೂಡಿಸಬೇಕಿತ್ತು. ಹಾಗಾಗಿ ಈ ಪೋಸ್ಟ್ ಮಾಡಲಾಯಿತು. ದಯವಿಟ್ಟು ಈ ಕ್ಯಾನ್ಸರ್ ಕುರಿತಂತೆ ಜಾಗೃತ ವಹಿಸಿ ಎಂದು ಪೂನಂ ವಿಡಿಯೋ ಮೂಲಕ ಹೇಳಿದ್ದಾರೆ.

ಅಭಿಮಾನಿಗಳಿಗೆ ವಿಡಿಯೋ ಮೂಲಕ ಕ್ಷಮೆ ಕೇಳಿದ ಪೂನಂ
ನನ್ನ ಸಾವಿನ ಸುದ್ದಿಯಿಂದ ನಿಮಗೆ ಆಘಾತ, ಆತಂಕ ಆಗಿದ್ದಕ್ಕೆ ಕ್ಷಮಿಸಿ ನನ್ನ ಉದ್ದೇಶ ಗರ್ಭಕಂಠ ಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸುವುದಷ್ಟೇ ಆಗಿತ್ತು ನನ್ನ ಮೇಲೆ ಸ್ಪಾಟ್‌ಲೈಟ್‌ ಹಾಕೋದಕ್ಕಿಂತ ಗರ್ಭಕಂಠ ಕ್ಯಾನ್ಸರ್‌ ಮೇಲೆ ಸ್ಪಾಟ್‌ ಲೈಟ್ ಹಾಕಿ ವಿಡಿಯೋ ಮೂಲಕ ಅಂತೆ ಕಂತೆಗಳಿಗೆ ಫುಲ್‌ಸ್ಟಾಪ್ ಇಟ್ಟಿದ್ದಾರೆ.

RELATED ARTICLES

Related Articles

TRENDING ARTICLES