Wednesday, January 22, 2025

Murder Case: ನಡು ಬೀದಿಯಲ್ಲಿ ವ್ಯಕ್ತಿಯ ಬರ್ಬರ ಕೊಲೆ

ಚಿಕ್ಕಬಳ್ಳಾಪುರ: ಪಟ್ಟಣದ ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲ್ಲಲಾಗಿದೆ. ಕೊಲೆಗಾರ ಪೊಲೀಸರಿಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಟಿಪ್ಪು ಬಡಾವಣೆಯ ಅಂಗಡಿ‌ಯೊಂದರ ಮುಂದೆ ಘಟನೆ ನಡೆದಿದೆ.

ಜಾಬೀರ್ ಪಾಷ ಅಲಿಯಾಸ್ ನೇಪಾಳ್ (26) ಕೊಲೆಯಾದ ವ್ಯಕ್ತಿ. ಮುಕ್ತಿಯಾರ್ ಪಾಷ ಕೊಲೆ ಮಾಡಿ ಪೊಲೀಸರಿಗೆ ಶರಣಾದ ವ್ಯಕ್ತಿ. ಮಧ್ಯರಾತ್ರಿ ಕೊಲೆ ಮಾಡಿ ಬಂದು ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆಗೆ ಶವವನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಚಿಂತಾಮಣಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

RELATED ARTICLES

Related Articles

TRENDING ARTICLES