Monday, December 23, 2024

ಹಿರಿಯ ರಾಜಕಾರಣಿ ಎಲ್​.ಕೆ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ಸರ್ಕಾರ!

ನವದೆಹಲಿ : ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾನಿ ಅವರು ಭಾರತ ರತ್ನ ಪ್ರಶಸ್ತಿ ಭಾಜನರಾಗಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡುವ ಮೂಲಕ ಶುಭ ಕೋರಿದ್ದಾರೆ.

ಇದನ್ನೂ ಓದಿ: ಕೇಂದ್ರ ಬಜೆಟ್​ನಲ್ಲಿ ರಾಜ್ಯಕ್ಕೆ ಅನ್ಯಾಯ: ಫೆಬ್ರವರಿ 7ಕ್ಕೆ ದೆಹಲಿಯಲ್ಲಿ ಪ್ರತಿಭಟನೆ

ಪ್ರಧಾನಿ ಮೋದಿಯವರು ಎಕ್ಸ್​ ಪೋಸ್ಟ್​ ನಲ್ಲಿ ಸಂತಸವನ್ನು ಹಂಚಿಕೊಂಡಿದ್ದಾರೆ. ಎಲ್​ ಕೆ ಅಡ್ವಾಣಿಯವರಿಗೆ ಭಾರತರತ್ನ ಪ್ರಶಸ್ತಿ ಸಿಗಲಿದೆ ಎನ್ನುವ ಸುದ್ದಿಯನ್ನು ಹಂಚಿಕೊಳ್ಳಲು ತುಂಬ ಸಂತೋಷವಾಗುತ್ತದೆ. ಈಗಾಗಲೇ ಅವರಿಗೆ ಕರೆ ಮಾಡಿ ಶುಭಕೋರಿದ್ದೇನೆ, ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಇವರು ಒಬ್ಬರು, ಭಾರತದ ಅಭಿವೃದ್ದಿಗೆ ಅವರ ಕೊಡುಗೆ ಸ್ಮರಣೀಯ ಎಂದು ಪೋಸ್ಟ್​​ ಮಾಡಿದ್ದಾರೆ.

 

ಇತ್ತೀಚೆಗೆ ಬಿಹಾರದ ಸಮಾಜವಾದಿ ಹೋರಾಟಗಾರ, ರಾಜಕಾರಣಿಗೆ ಕರ್ಪೂರಿ ಠಾಕೂರ್​ ಅವರಿಗೆ ಭಾರತ ಸರ್ಕಾರ ಮರಣೋತ್ತರವಾಗಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಿತ್ತು, ಇದೀಗ ಹಿರಿಯ ರಾಜಕಾರಣಿ ಎಲ್​.ಅಡ್ವಾಣಿಯವರಿಗೆ ಭಾರತರತ್ನ ಘೋಷಿಸಿದೆ.

 

RELATED ARTICLES

Related Articles

TRENDING ARTICLES