Sunday, December 22, 2024

ತ್ರಿವಿಧ ಡಾ. ಶಿವಕುಮಾರ ಶ್ರೀಗಳಿಗೆ ‘ಭಾರತ ರತ್ನ’ ನೀಡುವಂತೆ ಕೇಳಿದ್ವಿ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ನಾವು ಲಿಂಗೈಕ್ಯರಾಗಿರುವ ತುಮಕೂರು ಸಿದ್ಧಗಂಗಾ ಮಠದ ತ್ರಿವಿಧ ಡಾ. ಶಿವಕುಮಾರ ಶ್ರೀಗಳಿಗೆ ‘ಭಾರತ ರತ್ನ’ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎಂ.ಬಿ.ಎ. ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಂದು ಹಿರಿಯ ಬಿಜೆಪಿ ಮುಖಂಡ ಎಲ್‌ ಕೆ ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರವು ‘ಭಾರತ ರತ್ನ’ಕ್ಕೆ ಆಯ್ಕೆ ಕೊಟ್ಟಿರುವುದಕ್ಕೆ ನಾವೇನೂ ಬೇಡ ಅನ್ನುವುದಿಲ್ಲ. ನಾವು ಲಿಂಗೈಕ್ಯರಾಗಿರುವ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ನೀಡುವಂತೆ ಆಗ್ರಹಿಸಿ ಪತ್ರ ಬರೆದಿದ್ದೆವು” ಎಂದು ತಿಳಿಸಿದರು.

ನೀವು ಈ ಸುದ್ದಿ ಓದಿದ್ದೀರಾ.?: ಬಿಜೆಪಿಯವರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಿ: ಡಿ.ಕೆ. ಶಿವಕುಮಾರ್

ಕನಕದಾಮದ ಈಶ್ವರಾನಂದಪುರಿ ಸ್ವಾಮೀಜಿ ಅವರಿಗೆ ಬಾಗೂರಿನಲ್ಲಿರುವ ಚನ್ನಕೇಶವ ದೇವಾಲಯದ ಗರ್ಭಗುಡಿಗೆ ಪ್ರವೇಶಿಸದಂತೆ ತಡೆದ ವಿಚಾರದ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಏನೂ ಮಾಹಿತಿ ಬಂದಿಲ್ಲ. ನನ್ನ ಗಮನಕ್ಕೂ ಬಂದಿಲ್ಲ. ಗೊತ್ತಿಲ್ಲದ ವಿಚಾರಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

RELATED ARTICLES

Related Articles

TRENDING ARTICLES