Wednesday, January 22, 2025

ಫೆಬ್ರವರಿ 10ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ!

ಮೈಸೂರು: ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಗೃಹ ಸಚಿವ ಅಮಿತ್ ಶಾ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಅಮಿತ್ ಶಾ ಇದೇ ಫೆಬ್ರವರಿ 9 ಮತ್ತು 10ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಆಗಮಿಸಲಿದ್ದಾರೆ. ಫೆ.10 ಶನಿವಾರ ಸಂಜೆ 5 ಗಂಟೆಗೆ ಶ್ರೀಮತಿ ಪಾರ್ವತಮ್ಮ ಮತ್ತು ಡಾ. ಶ್ರೀ ಶಾನಮೂರು ಶಿವಶಂಕರಪ್ಪ ಅತಿಥಿಗೃಹವನ್ನು ಅಮಿತ್‌ ಶಾ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲೇ ಶಾಮನೂರು ಶಿವಶಂಕರಪ್ಪ ಅವರನ್ನು ಸನ್ಮಾನಿಸಲಾಗುತ್ತದೆ.

ಇದನ್ನೂ ಓದಿ: ಓಲಾ, ಊಬರ್, ಟ್ಯಾಕ್ಸಿಗಳ ಕಳ್ಳಾಟಕ್ಕೆ ಸಾರಿಗೆ ಇಲಾಖೆಯಿಂದ ಬ್ರೇಕ್: ಏಕರೂಪ ದರ ಅಸ್ತ್ರ ಪ್ರಯೋಗ

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ವಹಿಸಲಿದ್ದಾರೆ, ಹೆಚ್‌ಡಿ ಕುಮಾರಸ್ವಾಮಿ, ಬಸವರಾಜ್‌ ಬೊಮ್ಮಾಯಿ, ಆರ್‌ ಅಶೋಕ, ವಿಜಯೇಂದ್ರ, ಸಿಟಿ ರವಿ, ಪ್ರಭಾಕರ ಕೋರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

RELATED ARTICLES

Related Articles

TRENDING ARTICLES