ಬೆಂಗಳೂರು : ಮೊದಲ ಟೆಸ್ಟ್ ಪಂದ್ಯ ಗೆದ್ದು ಬೀಗುತ್ತಿದ್ದ ಆಂಗ್ಲರಿಗೆ ರೋಹಿತ್ ಪಡೆ ಎರಡನೇ ಟೆಸ್ಟ್ ಪಂದ್ಯದಲ್ಲಿ ತಿರುಗೇಟು ನೀಡಿತು.
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 106 ರನ್ಗಳ ಬೃಹತ್ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಎರಡು ತಂಡಗಳು ತಲಾ 1-1 ಪಂದ್ಯ ಗೆದ್ದು ಸಮಬಲ ಸಾಧಿಸಿವೆ.
399 ರನ್ಗಳ ಗುರಿಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 292 ರನ್ಗಳಿಗೆ ಸರ್ವಪತನ ಕಂಡಿತು. ಇಂಗ್ಲೆಂಡ್ ಪರ ಝಾಕ್ ಕ್ರಾಲಿ (73) ಉತ್ತಮ ಆರಂಭ ಒದಗಿಸಿದ್ದರು. ಆದರೆ, 4ನೇ ದಿನದಾಟದ ಮೊದಲ ಸೆಷನ್ನಲ್ಲೇ 5 ವಿಕೆಟ್ ಕಬಳಿಸುವ ಮೂಲಕ ಭಾರತದ ಬೌಲರ್ಗಳು ಪರಾಕ್ರಮ ಮೆರೆದರು.
ಭಾರತದ ಪರ ಬುಮ್ರಾ 3 (ಮೊದಲ ಇನ್ನಿಂಗ್ಸ್ನಲ್ಲಿ 6 ವಿಕೆಟ್), ಆರ್. ಅಶ್ವಿನ್ 3, ಕುಲ್ದೀಪ್ (ಮೊದಲ ಇನ್ನಿಂಗ್ಸ್ನಲ್ಲಿ 3 ವಿಕೆಟ್), ಯಾದವ್, ಮನು ಕುಮಾರ್, ಅಕ್ಸರ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು. ಜಸ್ಪ್ರಿತ್ ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
CASTLED! ⚡️⚡️
Jasprit Bumrah wraps things up in Vizag as #TeamIndia win the 2nd Test and level the series 1⃣-1⃣#TeamIndia | #INDvENG | @Jaspritbumrah93 | @IDFCFIRSTBank pic.twitter.com/KHcIvhMGtD
— BCCI (@BCCI) February 5, 2024
ಮೊದಲ ಇನ್ನಿಂಗ್ಸ್ನಲ್ಲಿ ಭಾರತ 396 ಹಾಗೂ ಇಂಗ್ಲೆಂಡ್ 253 ರನ್ಗಳಿಗೆ ಆಲೌಟ್ ಆಗಿತ್ತು. ಎರಡನೇ ಇನ್ನಿಂಗ್ಸ್ನಲ್ಲಿ 255 ರನ್ಗಳಿಗೆ ಭಾರತ ಆಲೌಟ್ ಆಗಿತ್ತು.
A splendid bowling display on Day 4 powers #TeamIndia to a 106-run win 🙌
Scorecard ▶️ https://t.co/X85JZGt0EV#INDvENG | @IDFCFIRSTBank pic.twitter.com/P9EXiY8lVP
— BCCI (@BCCI) February 5, 2024