Monday, May 13, 2024

ಭಾರತಕ್ಕೆ 106 ರನ್​ಗಳ ಭರ್ಜರಿ ಗೆಲುವು, ಸರಣಿ 1-1 ಸಮಬಲ

ಬೆಂಗಳೂರು : ಮೊದಲ ಟೆಸ್ಟ್ ಪಂದ್ಯ ಗೆದ್ದು ಬೀಗುತ್ತಿದ್ದ ಆಂಗ್ಲರಿಗೆ ರೋಹಿತ್ ಪಡೆ ಎರಡನೇ ಟೆಸ್ಟ್​ ಪಂದ್ಯದಲ್ಲಿ ತಿರುಗೇಟು ನೀಡಿತು.

ಇಂಗ್ಲೆಂಡ್​ ವಿರುದ್ಧದ ಎರಡನೇ ಟೆಸ್ಟ್​ ಪಂದ್ಯದಲ್ಲಿ ಭಾರತ 106 ರನ್​ಗಳ ಬೃಹತ್ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಎರಡು ತಂಡಗಳು ತಲಾ 1-1 ಪಂದ್ಯ ಗೆದ್ದು ಸಮಬಲ ಸಾಧಿಸಿವೆ.

399 ರನ್​ಗಳ ಗುರಿಯೊಂದಿಗೆ ಎರಡನೇ ಇನ್ನಿಂಗ್ಸ್​ ಆರಂಭಿಸಿದ ಇಂಗ್ಲೆಂಡ್​ 292 ರನ್​ಗಳಿಗೆ ಸರ್ವಪತನ ಕಂಡಿತು. ಇಂಗ್ಲೆಂಡ್ ಪರ ಝಾಕ್ ಕ್ರಾಲಿ (73) ಉತ್ತಮ ಆರಂಭ ಒದಗಿಸಿದ್ದರು. ಆದರೆ, 4ನೇ ದಿನದಾಟದ ಮೊದಲ ಸೆಷನ್​ನಲ್ಲೇ 5 ವಿಕೆಟ್ ಕಬಳಿಸುವ ಮೂಲಕ ಭಾರತದ ಬೌಲರ್​ಗಳು ಪರಾಕ್ರಮ ಮೆರೆದರು.

ಭಾರತದ ಪರ ಬುಮ್ರಾ 3 (ಮೊದಲ ಇನ್ನಿಂಗ್ಸ್​ನಲ್ಲಿ 6 ವಿಕೆಟ್), ಆರ್​. ಅಶ್ವಿನ್ 3, ಕುಲ್​ದೀಪ್ (ಮೊದಲ ಇನ್ನಿಂಗ್ಸ್​ನಲ್ಲಿ 3 ವಿಕೆಟ್), ಯಾದವ್, ಮನು ಕುಮಾರ್, ಅಕ್ಸರ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು. ಜಸ್ಪ್ರಿತ್ ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 396 ಹಾಗೂ ಇಂಗ್ಲೆಂಡ್​ 253 ರನ್​ಗಳಿಗೆ ಆಲೌಟ್​ ಆಗಿತ್ತು. ಎರಡನೇ ಇನ್ನಿಂಗ್ಸ್​ನಲ್ಲಿ 255 ರನ್​ಗಳಿಗೆ ಭಾರತ ಆಲೌಟ್​ ಆಗಿತ್ತು.

RELATED ARTICLES

Related Articles

TRENDING ARTICLES