Monday, December 23, 2024

ಬಿಗ್​ ಬಾಸ್ ಮಾಜಿ ಸ್ಪರ್ಧಿ ಸೋನು ಗೌಡಗೆ ಅಪಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಪಾರ್ಕಿಂಗ್ ಮಾಡಿದ್ದ ಕಾರನ್ನು ತೆಗೆಯಲು ಹೋಗಿ ಪಿಲ್ಲರ್ ಗೆ ಕಾರು ಗುದ್ದಿದ್ದು ಬಿಗ್ ಬಾಸ್ ಮಾಜಿ ಸ್ಪರ್ಧಿ ಸೋನು ಗೌಡ  ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಾಹಿತಿಗಳ ಪ್ರಕಾರ ಸೋನು ಇತ್ತೀಚೆಗಷ್ಟೇ ಕಾರು ಕಲಿಯಲು ಆರಂಭಿಸಿದ್ದಾರಂತೆ. ಹಾಗಾಗಿ ಎಕ್ಸಿಲೇಟರ್ ಮತ್ತು ಬ್ರೇಕ್ ನಡುವಿನ ಗೊಂದಲದಿಂದಾಗಿ ಅಪಾರ್ಟ್ ಮೆಂಟ್ ನ ಪಿಲ್ಲರ್ ಗೆ ಕಾರು ಗುದ್ದಿಸಿದ್ದಾರೆ. ಕೈಗೆ ಮತ್ತು ಕಾಲುಗಳಿಗೆ ಸಣ್ಣಪುಟ್ಟ ಏಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಗುದ್ದಿದ ರಭಸಕ್ಕಂತೂ ಕಾರು ನುಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.
ಹಾಟ್ ಹಾಟ್ ಫೋಟೋ ಶೂಟ್ ಗಳ ಮೂಲಕವೇ ಸಖತ್ ಫೇಮಸ್ ಆದವರು ಸೋನು. ಟಿಕ್ ಟಾಕ್ ಇದ್ದಾಗ ಸೋಷಿಯಲ್ ಮೀಡಿಯಾದಲ್ಲಿ ಇವರ ವಿಡಿಯೋಗಳು ಸಖತ್ ವೈರಲ್ ಕೂಡ ಆಗಿದ್ದವು. ಈ ಜನಪ್ರಿಯತೆಯೇ ಅವರನ್ನು ಬಿಗ್ ಬಾಸ್ ಮನೆಗೆ ಕರೆದುಕೊಂಡು ಹೋಗಿತ್ತು.

RELATED ARTICLES

Related Articles

TRENDING ARTICLES