ಬೆಂಗಳೂರು: ಮೈತ್ರಿ ಬಳಿಕ ಬಿಜೆಪಿ-ಜೆಡಿಎಸ್ಗೆ ಮೊದಲ ಅಗ್ನಿಪರೀಕ್ಷೆ ಶುರುವಾಗಿದ್ದು ಫೆಬ್ರವರಿ 16ಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದೆ, ಈಗಾಗಲೇ ಜೆಡಿಎಸ್ ಗೆ ಬಿಜೆಪಿ ಬೆಂಬಲ ಸೂಚಿಸಿದ್ದು, ಮೈತ್ರಿ ಕೂಟದ ಅಭ್ಯರ್ಥಿಯಾಗಿ ಎ.ಪಿ.ರಂಗನಾಥ್ ಕಣಕ್ಕೆ ಇಳಿದಿದ್ದಾರೆ.
ಈ ಮಧ್ಯೆ ಲೋಕಸಭಾ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಕೇಳುತ್ತಿದೆ. ಆದರೆ, ಆ ಕ್ಷೇತ್ರಗಳನ್ನು ಬಿಟ್ಟುಕೊಡಬಾರದು ಎಂದು ನಿನ್ನೆಯಷ್ಟೇ ಬಿಜೆಪಿಯ ಮಾಜಿ ಶಾಸಕ ಪ್ರೀತಂಗೌಡ ಬಹಿರಂಗ ಹೇಳಿಕ ನೀಡಿದ್ದರು. ಇದರಿಂದ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ ಹಾಗಾಗಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಪ್ರಮುಖರ ಮಹತ್ವದ ಸಭೆ ಕರೆದಿದ್ದಾರೆ.
ಇದನ್ನೂ ಓದಿ: ನಾಳೆ ಬೆಂಗಳೂರು ಚಲೋಗೆ ರೈತ ಸಂಘಟನೆ ಕರೆ
ಬೆಂಗಳೂರಿನ ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಸಭೆ ನಡೆಯಲಿದ್ದು ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾ,ಮಿ ಅಭ್ಯರ್ಥಿಗಳ ಆಯ್ಕೆ ಕುರಿತು ಪ್ರಮುಖರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.