Wednesday, January 22, 2025

ಕೇಂದ್ರ ಬಜೆಟ್​: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 45 ಸಾವಿರ ಕೋಟಿಗೂ ಅಧಿಕ ನಷ್ಟ!

ಬೆಂಗಳೂರು : ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರುವ ಕುರಿತು ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಜಂಟಿಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು.

ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಕೇಂದ್ರಕ್ಕೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣದಲ್ಲಿ ಮೋಸವಾಗುತ್ತಿದೆ. ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 45 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗುತ್ತಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು (ಫೆ.5) ಸೋಮವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಇಂದು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ರಾಜ್ಯದ ಪಾಲಿನ ತೆರಿಗೆ ಹಣವನ್ನು ನೀಡದ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರವರಿ 7 ರಂದು ದೆಹಲಿಯ ಜಂತರ್​ ಮಂತರ್​​ನಲ್ಲಿ ಧರಣಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನಾವು ಕೇಂದ್ರ ಸರ್ಕಾರಕ್ಕೆ 100 ರೂ. ತೆರಿಗೆ ಕಟ್ಟಿದರೆ ನಮಗೆ ಶೇ. 12-13ರಷ್ಟು ವಾಪಸ್ ಬರುತ್ತಿದೆ. ಆದರೂ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲವೆಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಂಡ್ಯ-ಹಾಸನ ಬಿಜೆಪಿ ಪಾಲು: ಇಂದು ಜೆಡಿಎಸ್‌ ಮಹತ್ವದ ಮೀಟಿಂಗ್!

ಕೇಂದ್ರದ ವಿರುದ್ಧ ನಾವು ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ. ದೆಹಲಿಯಲ್ಲಿ ನಮ್ಮ ಇಡೀ ಸರ್ಕಾರ ಪ್ರತಿಭಟನೆ ಮಾಡಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಧರಣಿಯಲ್ಲಿ ರಾಜ್ಯದ ಎಲ್ಲಾ ಸಂಸದರು ಕೂಡ ಭಾಗಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.

ಕೇಂದ್ರ ಸರ್ಕಾರದ ವಿರುದ್ಧ ಈವರೆಗೆ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಆದರೆ ಈಗ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಾಳೆ ಸಂಜೆಯೇ ದೆಹಲಿಗೆ ಹೋಗುತ್ತೇವೆ. ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ಸಂವಿಧಾನ ಅಳವಡಿಸಿಕೊಂಡ ಬಳಿಕ ಒಕ್ಕೂಟ ವ್ಯವಸ್ಥೆ ಒಪ್ಪಿಕೊಂಡಿದ್ದೇವೆ. ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ಈ ಹಣ ರಾಜ್ಯಗಳಿಗೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

RELATED ARTICLES

Related Articles

TRENDING ARTICLES