ಬೆಂಗಳೂರು : ದೆಹಲಿ ಪ್ರತಿಭಟನೆ ರಾಜಕೀಯ ಸ್ಟಂಟ್ ಅಷ್ಟೇ. ಅವರ ವಿರುದ್ದ ನಾವು ಫೆ.7 ರಂದು ಪ್ರತಿಭಟನೆ ಮಾಡ್ತಿವಿ. ಸಿದ್ದರಾಮಯ್ಯ ಅವರ ಸರ್ಕಾರದ ವೈಫಲ್ಯ ವಿರೋಧಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಕಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇವರದ್ದು ರೈತ ವಿರೋಧಿ ಸರ್ಕಾರ. ರಾಜ್ಯದಲ್ಲಿದೆ ಬರ ಇದೆ, ಒಂದು ರೂಪಾಯಿನೂ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಛೇಡಿಸಿದರು.
14ನೇ ಹಣಕಾಸಿಗಿಂತ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಹಣ ಕಡಿಮೆ ಆಗಿದೆ ಅಂತ ಹೇಳಿದ್ದಾರೆ. 15ನೇ ಹಣಕಾಸು ಆಯೊಗ ಸಮಿತಿ ಬಂದಾಗ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇತ್ತು. ಅವಾಗ ರಾಜ್ಯದ ಆರ್ಥಿಕ ಪರಿಸ್ಥತಿ ಸರಿಯಾಗಿ ಮಾಹಿತಿ ನೀಡಿಲ್ಲ. ಯುಪಿಎ 81791 ಕೋಟಿ ಆಗಿತ್ತು. ಎನ್ಡಿಎ ಅವಧಿಯಲ್ಲಿ 2.28 ಲಕ್ಷ ತೆರಿಗೆ ಡೆವ್ಯಲೂಷನ್ ಬಂದಿದೆ ಎಂದು ಹೇಳಿದರು.
ಕೇಂದ್ರ 5 ಕೆಜಿ ಅಕ್ಕಿ ಉಚಿತವಾಗಿ ನೀಡಿದೆ
ಯುಪಿಎ ಅವಧಿಯಕಲ್ಲಿ 60 ಸಾವಿರ ಕೋಟಿ ಬಿಡುಗಡೆಯಾಗಿತ್ತು. ಪ್ರಧಾನಿ ಮೋದಿ ಅವಧಿಯಲ್ಲಿ 2 ಲಕ್ಷ ಕೋಟಿ ಬಿಡುಗಡೆಯಾಗಿದೆ. ಇದರ ಅವಧಿ ಇನ್ನೂ ಎರಡು ವರ್ಷ ಇದೆ. ಇದಲ್ಲದೇ ಬೇರೆ ಬೇರೆ ರೂಪದಲ್ಲಿ ಅನುದಾನ ಬರುತ್ತದೆ. ರಸ್ತೆಗೆ ಸ್ವಾತಂತ್ರ್ಯ ಬಂದಾಗಿನಿಂದ 2014 ರವರೆಗೆ 6 ಸಾವಿರ ಕಿ.ಮೀ ಇತ್ತು. ಮೋದಿ ಅವಧಿಯಲ್ಲಿ 13 ಸಾವಿರ ಕಿ.ಮೀ ಅಭಿವೃದ್ಧಿಯಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 60 ಲಕ್ಷ ರೈತರಿಗೆ ಅನುಕೂಲವಾಗಿದೆ. ಕೇಂದ್ರ ಸರ್ಕಾರ 5 ಕೆಜಿ ಅಕ್ಕಿಯನ್ನು ಸಂಪೂರ್ಣ ಉಚಿತವಾಗಿ ನೀಡಿದೆ. 10 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.