ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನನ್ನ ಮಗ ಮೃಣಾಲ್ ಹೆಬ್ಬಾಳ್ಕರ್ ಸ್ಪರ್ಧೆ ಮಾಡಬೇಕೆಂದು ಬೆಳಗಾವಿ ಜನ ಬಯಸಿದ್ದಾರೆ. ಆದರೆ ಈ ವಿಚಾರದಲ್ಲಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನು ಪಾಲಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ನನ್ನ ಪುತ್ರ ಸ್ಪರ್ಧೆ ಮಾಡಬೇಕು ಎನ್ನುವ ಬಯಕೆ ಜನರದ್ದು. ಈ ನಿಟ್ಟಿನಲ್ಲಿ ಆತನ ಹೆಸರು ಹೈಕಮಾಂಡ್‌ಗೆ ಹೋಗಿರುವ ವಿಚಾರ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ.
ಇದನ್ನೂ ಓದಿ: ‘ನನ್ನ ತೆರಿಗೆ ನನ್ನಹಕ್ಕು’ ಅಭಿಯಾನಕ್ಕೆ ನನ್ನ ಬೆಂಬಲವಿದೆ!: ಸಿಎಂ ಸಿದ್ದರಾಮಯ್ಯ!
ನನ್ನ ಸಹೋದರ ಪರಿಷತ್ತಿನ ಸದಸ್ಯನಾಗುವಾಗಲೂ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನದ ಮೇರೆಗೆ ಒಪ್ಪಿಗೆ ನೀಡಿದ್ದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಮೃಣಾಲ್ ಅಥವಾ ಬೇರೆ ಇನ್ಯಾರಿಗೆ ನೀಡಿದರೂ ಕೆಲಸ ಮಾಡುತ್ತೇನೆ. ಈಗಾಗಲೇ ಟಿಕೆಟ್‌ಗೆ ಸಂಬಂಧಿಸಿ ಸರ್ವೇ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.