ಬೆಂಗಳೂರು : ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬೆಂಗಳೂರು ಮಹಾನಗರ ಪಾಲಿಕೆ ಗುಡ್ ನ್ಯೂಸ್ ಕೊಟ್ಟಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಕಟ್ಟಡ ಮಾಲೀಕರಿಗೆ ಶೇ.50 ರಷ್ಟು ತೆರಿಗೆ ಪಾವತಿಗೆ ಪಾಲಿಕೆ ಆಫರ್ ನೀಡಿದೆ.
ಆರ್ಥಿಕ ವರ್ಷ ಮುಗಿಯುವುದರೊಳಗೆ ಆದಾಯ ಗುರಿ ತಲುಪಲು ಬಿಬಿಎಂಪಿ ಪ್ಲ್ಯಾನ್ ಮಾಡಿದ್ದು ರಿಯಾಯಿತಿ ನೀಡಿದೆ. ಬಾಕಿ ಇರೋ ತೆರಿಗೆಯಲ್ಲಿ ಅರ್ಧದಷ್ಟು ತೆರಿಗೆ ಪಾವತಿ ಮಾಡಿ ಅಪೀಲು ಸಲ್ಲಿಸಿದವರಿಗೆ ಮಾತ್ರ ತೆರಿಗೆ ರಿಯಾಯಿತಿ ನೀಡಲಾಗುತ್ತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಸ್ಥಳೀಯ ಪಾಲಿಕೆ ಕಂದಾಯ ಕಚೇರಿಯಲ್ಲಿ ಅರ್ಧ ತೆರಿಗೆ ಕಟ್ಟಿ, ಉಳಿದರರ್ಧ ತೆರಿಗೆ ಮನ್ನಾಕೆ ಮನವಿ ಸಲ್ಲಿಸಬೇಕು. ನೋಟಿಸ್ ಪಡೆದ ತೆರಿಗೆದಾರರು ಅರ್ಧದಷ್ಟು ತೆರಿಗೆ ಪಾವತಿಸಿ ನಂತರ ಪಾಲಿಕೆಗೆ ಅಪೀಲ್ ಸಲ್ಲಿಸಬೇಕು. ಸರ್ಕಾರ ಆಸ್ತಿ ತೆರಿಗೆ ಸಂಗ್ರಹದಲ್ಲಿ ತಿದ್ದುಪಡಿ ಮಾಡಿದ್ರೆ ಅರ್ಧದಷ್ಟು ತೆರಿಗೆ ವಿನಾಯಿತಿಯಾಗುವ ಸಾಧ್ಯತೆ ಇದೆ.
ಸದ್ಯ ಬಾಕಿ ಇರೋ ತೆರಿಗೆಯಲ್ಲಿ ಅರ್ಧದಷ್ಟು ತೆರಿಗೆ ಪಾವತಿ ಮಾಡಿ ಅಪೀಲು ಸಲ್ಲಿಸಿದವರಿಗೆ ಮಾತ್ರ ತೆರಿಗೆ ರಿಯಾಯಿತಿ ನೀಡಲಾಗುತ್ತೆ ಎಂದು ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.