Wednesday, January 22, 2025

ಇಂದಿನಿಂದ ಕೇಂದ್ರದ ಭಾರತ್ ಬ್ರ್ಯಾಂಡ್​ನ ಅಕ್ಕಿ ಮಾರಾಟ; ಕೆಜಿಗೆ 29 ರೂ

ಬೆಂಗಳೂರು: ಅಕ್ಕಿ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಭಾರತ್ ಬ್ರ್ಯಾಂಡ್‌‌ ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸಿಗಲಿದೆ.

ಹೌದು,ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ಸಿಗಲಿದೆ. ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ. ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ.

ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿಗೆ ಅವಕಾಶ

ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಅಷ್ಟೇ ಅಲ್ಲದೆ ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್​ಗಳಲ್ಲೂ ಭಾರತ್ ಅಕ್ಕಿ ಲಭ್ಯವಾಗಲಿದೆ. ಎನ್‌ಸಿಸಿಎಫ್‌ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ಅಕ್ಕಿ ತಲುಪಿಸಲು ಸಿದ್ಧತೆ ನಡೆದಿದೆ.‘

ಇದನ್ನೂ ಓದಿ: ಕರ್ತವ್ಯ ನಿರತ ಯೋಧ ಹೃದಯಾಘಾತದಿಂದ ನಿಧನ

ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ಜನ ಕಂಗೆಟ್ಟಿದ್ದಾರೆ. ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್‌ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಸದ್ಯ ಈಗ ಅಕ್ಕಿಯನ್ನೂ ಕೂಡ ಮಾರಾಟ ಮಾಡಲು ಮುಂದಾಗಿದೆ.

RELATED ARTICLES

Related Articles

TRENDING ARTICLES