Sunday, December 22, 2024

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಬೆಂಗಳೂರು : ಉತ್ತರಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಿದ್ದಾರೆ.

ಸೋಮವಾರದಿಂದ ಉತ್ತರಾಖಂಡ್ ವಿಧಾನಸಭೆಯಲ್ಲಿ ನಾಲ್ಕು ದಿನಗಳ ವಿಶೇಷ ಅಧಿವೇಶನ ಆರಂಭಗೊಂಡಿದ್ದು, ಇಂದು ಕಾಂಗ್ರೆಸ್ ಶಾಸಕರ ವಿರೋಧದ ನಡುವೆಯೇ ಸಿಎಂ ಪುಷ್ಕರ್ ಸಿಂಗ್ ಯುಸಿಸಿ ಮಸೂದೆಯನ್ನು ಮಂಡಿಸಿದರು.

ಇದೊಂದು ಹೆಮ್ಮೆಯ ಕ್ಷಣವಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ಬಣ್ಣಿಸಿದ್ದಾರೆ. ಇದರೊಂದಿಗೆ ಬಿಜೆಪಿ ಆಡಳಿತವಿರುವ ಉತ್ತರಾಖಂಡ್ ರಾಜ್ಯವು ಏಕರೂಪ ನಾಗರಿಕ ಸಂಹಿತೆಯನ್ನ ಅಳವಡಿಸಿಕೊಂಡ ದೇಶದ ಮೊದಲ ರಾಜ್ಯವಾಗಿ ಹೊರಹೊಮ್ಮಿದೆ.

ಇನ್ನು, ಯುಸಿಸಿ ಜಾರಿಯಾದಲ್ಲಿ ಮದುವೆ, ವಿಚ್ಛೇದನ, ಆಸ್ತಿ ಹಕ್ಕು ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲ ಧರ್ಮಗಳಿಗೂ ಒಂದೇ ಕಾನೂನು ಅನ್ವಯವಾಗಲಿದ್ದು, ಈವರೆಗೂ ಆಯಾಯ ಧರ್ಮಗಳು ಆಯಾಯ ವೈಯಕ್ತಿಕ ಕಾನೂನು ಕ್ರಮಗಳನ್ನು ಅನುಸರಿಸುತ್ತಿದ್ದವು. ಇದು ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತಿತ್ತು. ಆದರೆ ಈ ಮಸೂದೆ ಮಂಡನೆಯಾದರೆ ಎಲ್ಲ ಧರ್ಮಗಳಿಗೂ ಒಂದೇ ಕಾನೂನು ಅನ್ವಯವಾಗಲಿದೆ.

UPಯಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿ

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಮಂಡನೆಯಾದ ಹಿನ್ನೆಲೆಯ್ಲಲಿ ರಾಜಾಸ್ತಾನ ಮತ್ತು ಉತ್ತರ ಪ್ರದೇಶವೂ ಸಹ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಜ್ಜಾಗಿವೆ. ಈ ನಡುವೆ ಉತ್ತರ ಪ್ರದೇಶ ಸರ್ಕಾರ ಸಹ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲು ಮುಂದಾಗಿದೆ.

ಯುಸಿಸಿ ಕರಡು ರೂಪಿಸಲು ಸಮಿತಿ ನೇಮಕ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಯುಸಿಸಿ ಕರಡು ರೂಪಿಸಲು ಉನ್ನತ ಮಟ್ಟದ ಸಮಿತಿಯೊಂದನ್ನು ನೇಮಿಸಲಾಗಿದೆ. ಸಮಿತಿಯ ವರದಿಯನ್ನು ಸಲ್ಲಿಸುತ್ತಿದ್ದಂತೆಯೇ ಅದನ್ನು ಕ್ಯಾಬಿನೆಟ್​ ನಲ್ಲಿ ಅಂಗೀಕರಿಸಿ, ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES