Monday, May 13, 2024

ಸಿಎಂ ಸಿದ್ದರಾಮಯ್ಯಗೆ ಹತ್ತು ಸಾವಿರ ದಂಡ ವಿಧಿಸಿದ ಹೈಕೋರ್ಟ್!

ಬೆಂಗಳೂರು: ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ದ ದಾಖಲಾಗಿದ್ದ ಪ್ರಕರಣದ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ 10 ಸಾವಿರ ದಂಡ ವಿಧಿಸಬೇಕು ಎಂದು ಆದೇಶ ಹೊರಡಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್​. ದೀಕ್ಷಿತ್​ ಅವರಿದ್ದ ನ್ಯಾಯಪೀಠದಿಂದ ಈ ಆದೇಶ ನೀಡಿದೆ. ಅಲ್ಲದೇ ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗಲು ನ್ಯಾಯಪೀಠ ಸೂಚಿಸಿದೆ.

ಮಾರ್ಚ್​ 7 ರಂದು ರಾಮಲಿಂಗಾರೆಡ್ಡಿ, ಮಾರ್ಚ್ 11 ರಂದು ರಣದೀಪ್ ಸುರ್ಜೇವಾಲಾ, ಮಾರ್ಚ್ 15 ರಂದು ಎಂ.ಬಿ.ಪಾಟೀಲ್​ ಹಾಜರಾಗಲು ಪೀಠದಿಂದ ಆದೇಶ ಬಂದಿದೆ. ಪ್ರಕರಣದಲ್ಲಿ ಅನಗತ್ಯವಾಗಿ ಪಿಎಸ್​ಐ ಕು.ಜಹಿದಾ ಪ್ರತಿವಾದಿಯಾಗಿಸಿದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಮತ್ತಿತರರಿಗೆ 10 ಸಾವಿರ ರೂ. ದಂಡ ವಿಧಿಸಲಾಗಿದೆ.

ಜನ ಪ್ರತಿನಿಧಿಗಳು ಕಾನೂನು ಪಾಲಿಸಿದರೆ ಜನ ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ, ನಗರ ಜೀವನಕ್ಕೆ ದೊಡ್ಡ ಸಮಸ್ಯೆ ಆಗುತ್ತದೆ. ಪ್ರತಿಭಟನೆಗಳಿಂದ ಜನರಿಗೆ ಮತ್ತಷ್ಟು ಸಮಸ್ಯೆ ಆಗುತ್ತದೆ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು.ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಸಿಎಂ ಸಿದ್ದರಾಮಯ್ಯ ಹಾಜರಾಗಬೇಕು.ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.

RELATED ARTICLES

Related Articles

TRENDING ARTICLES