ಉಡುಪಿ : ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಏಕ ಕಾಲದಲ್ಲಿ ಖಾಲಿ ಇರುವ ಲೈನ್ ಮ್ಯಾನ್ಗಳ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಸಂಕೀರ್ಣದ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಮೆಸ್ಕಾಂ ಹಾಗೂ ಕೆ. ಪಿ.ಟಿ.ಸಿ.ಎಲ್ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಲೈನ್ ಮ್ಯಾನ್ಗಳ ಕೊರತೆ ಇದೆ. ಅದಕ್ಕಾಗಿ ಏಕ ಕಾಲದಲ್ಲಿ ಲೈನ್ ಮ್ಯಾನ್ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಲಲಾಗುವುದು. ಅದಕ್ಕೂ ಮೊದಲು ಜಿಲ್ಲೆಯಾದ್ಯಂತ ತರಬೇತಿ ನೀಡುವ ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.
ಅಧಿಕಾರಗಳ ನಡುವೆ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದೆ. ಕೆಲವರಿಗೆ ಮಾಹಿತಿಯೇ ಇಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಬಳಿ ತೆರಳಿ ಅವರ ಬೇಡಿಕೆ ಹಾಗೂ ಕ್ಷೇತ್ರದಲ್ಲಾಗುತ್ತಿರುವ ಸಮಸ್ಯೆಯ ಕುರಿತು ಮಾತನಾಡಿ ಅದಕ್ಕೆ ಸೂಕ್ತವಾಗಿ ಸ್ಪಂದಿಸಬೇಕು. ಬಡವರು ನಿಮ್ಮ ಬಳಿ ಬಾರದೇ ನೀವೇ ಅವರ ಬಳಿ ಹೋಗಿ, ಸಮಸ್ಯೆ ಕುರಿತು ಪಟ್ಟಿ ಮಾಡಿ ಅವರಿಗೆ ಸೂಕ್ತವಾಗಿ ಸ್ಪಂದಿಸಿ ಎಂದು ಸಚಿವ ಕೆ.ಜೆ ಜಾರ್ಜ್ ಸೂಚನೆ ನೀಡಿದ್ದಾರೆ.