Sunday, December 22, 2024

HSRP Number Plate:ನಿಮ್ಮ ವಾಹನಕ್ಕೆ HSRP ನಂಬರ್‌ ಪ್ಲೇಟ್‌ ಬೇಗ ಹಾಕಿಸಿ, ದಂಡ ತಪ್ಪಿಸಿ! ಇನ್ನೂ 7 ದಿನ ಮಾತ್ರ ಬಾಕಿ  

ಬೆಂಗಳೂರು: ಎಲ್ಲಾ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಫೆಬ್ರವರಿ 17ರ ಗಡುವು ಸಮೀಪಿಸುತ್ತಿದೆ.ನೀವು ಈ ಕೊಡಲೇ ನಂಬರ್​ ಪ್ಲೇಟ್ ಹಾಕಿಸಿ ಇಲ್ಲವಾದರೇ ದಂಡ ಕಟ್ಟಬೇಕಾಗುತ್ತದೆ. 

ಅರ್ಜಿ ಸಲ್ಲಿಕೆಗೆ ಫೆಬ್ರವರಿ 17 ಕೊನೆ ದಿನ

ಇದುವರೆಗೆ ಸಾರಿಗೆ ಇಲಾಖೆ ನೀಡಿರುವ ಎರಡನೇ ಗಡುವು ಇದಾಗಿದೆ.ನೀವು ಈ ಕೊಡಲೇ ನಿಮ್ಮ ವಾಹನಕ್ಕೆ HSRP ನಂಬರ್‌ ಪ್ಲೇಟ್‌ ಹಾಕಿಸಿ.

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ.

ಏನಿದು ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌?

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.‘

ಎಚ್ಎಸ್ಆರ್‌ಪಿ ಪಡೆಯುವುದು ಹೇಗೆ?

  1. ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರರ್ಸ್‌ (ಎಸ್‌ಐಎಎಂ) ವೆಬ್‌ಸೈಟ್‌ ಭೇಟಿ ನೀಡಿ ಮತ್ತು Book HSRP ಅನ್ನು ಕ್ಲಿಕ್‌ ಮಾಡಿ.
  2. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
  3. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  4. HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
  5. HSRP ಶುಲ್ಕವನ್ನು ಅನ್‌ಲೈನ್‌ನಲ್ಲಿ ಪಾವತಿಸಿ, ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  6. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ ರವಾನಿಸಲಾಗುವುದು.
  7. ನಿಮ್ಮ ಅನುಕೂಲಕ್ಕೆ ತಕ್ಕಂತಹ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
  8. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
  9. ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆಯನ್ನು ಹೊಂದಬಹುದು.

ಪ್ರಮುಖ ಅಂಶಗಳು

  1. ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಎಸ್‌ಐಎಎಂ ವೆಬ್‌ಸೈಟ್‌ ಮೂಲಕ HSRP ಅಳವಡಿಕೆಗೆ ಕಾಯ್ದಿರಿಸಿಕೊಳ್ಳಿ.
  2. ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND ಮಾರ್ಕ್ ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP, ಒಂದೇ ರೀತಿಯ ಪ್ಲೇಟ್‌ಗಳು, ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.
  3. HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು, ನಮೂದು, ರದ್ದತಿ, ಅರ್ಹತಾಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳಿಗೆ ಅನುಮತಿಸುವುದಿಲ್ಲ.
  4. ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ ಎಚ್‌ಎಸ್‌ಆರ್‌ಪಿ ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿರುವುದಿಲ್ಲ.
  5. HSRP ಅಳವಡಿಕೆಗೆ ನವೆಂಬರ್‌ 17 ಆಗಿದ್ದು, ಕೂಡಲೇ ಅರ್ಜಿ ಸಲ್ಲಿಸಿ

ಎಚ್‌ಎಸ್‌ಆರ್‌ಪಿ ಯಾಕೆ ಮತ್ತು ವಿಶೇಷತೆ ಏನು?

  1. HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.
  2. ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.
  3. ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
  4. ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.
  5. ರಸ್ತೆಗಳಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಹಕಾರಿ.
  6. ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.

RELATED ARTICLES

Related Articles

TRENDING ARTICLES