Wednesday, January 22, 2025

ಸಿದ್ದರಾಮಯ್ಯ ಯಾಕಾದ್ರೂ ಸಿಎಂ ಆದ್ರು ಅಂತ ತಲೆ ಚಚ್ಚಿಕೊಳ್ತಿದ್ದಾರೆ : ಬಿ.ವೈ. ವಿಜಯೇಂದ್ರ

ಬೆಂಗಳೂರು : ಕೆಂದ್ರ ಬಿಜೆಪಿ ಸರ್ಕಾರ ತೆರಿಗೆ ಅಂಕಿ ಅಂಶ ಬಿಟ್ಟಿಲ್ಲ ಎಂಬ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯಕ್ಕೆ ಕೇವಲ 80 ಸಾವಿರ ಕೋಟಿ ಕೊಟ್ಟಿದೆ. ಸಿಎಂ ಸಿದ್ದರಾಮಯ್ಯ ಯಾಕಾದ್ರು ಸಿಎಂ ಆದ್ರು ಅಂತಾ ತಲೆ ಚಚ್ಚಿಕೊಳ್ತಿದ್ದಾರೆ. ಸುಳ್ಳು ಹೇಳಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕಂತಾ ಅಂದುಕೊಂಡಿದ್ದಾರೆ ಎಂದು ಕುಟುಕಿದ್ದಾರೆ.

ರಾಜ್ಯ ಸರ್ಕಾರ ಆಡಳಿತ ನಡೆಸುವ ಪಕ್ಷ ನೀವು ಮೊದಲು ರೈತರಿಗೆ ಹಣ ಬಿಡುಗಡೆ ಮಾಡಿ. ಉತ್ತರ ಕೊಡೋದಕ್ಕೆ ಆಗೊಲ್ಲ ಅಂತ ಬೂಟಾಟಿಕೆ ಆಡ್ತಿದ್ದಾರೆ. ಕೇಂದ್ರ ಸರ್ಕಾರದ ಅನುದಾನ ಕಾಯದೆ ನಾವು ಈ ಹಿಂದೆ ಅನುದಾನ ಕೊಟ್ಟಿದ್ವು. ಮೇಕೆದಾಟು ಬಗ್ಗೆ ಹೋರಟ ಮಾಡ್ತಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ಎಲ್ಲಿ ಹೋಗಿದ್ದಾರೆ. ಕಾಗೆ ಹಾರಿಸುವ ಕೆಲಸ ಮಾಡ್ತಿದ್ದಾರೆ ಕಾಂಗ್ರೆಸ್ ನವರು ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಕುಸಿದು ಬಿದ್ದಿದೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಕುಸಿದು ಬಿದ್ದಿದೆ. ಇದರ ನಡುವೆ ರಾಜ್ಯ ಸರ್ಕಾರ ದೆಹಲಿಯಲ್ಲಿ ಬೀಡುಬಿಟ್ಟಿದೆ. ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಏನೂ ಮಾಡುವುದಿಲ್ಲ ಎಂಬ ಭಾವನೆ ಅಪರಾಧಿಗಳಿಗೆ ಕಾನೂನಿನ ಭಯವನ್ನೇ ಇಲ್ಲದಂತಾಗಿಸಿದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

RELATED ARTICLES

Related Articles

TRENDING ARTICLES