Monday, May 13, 2024

Congress Protest: ತೆರಿಗೆ ನ್ಯಾಯಕ್ಕಾಗಿ ಇಂದು ಕೇಂದ್ರದ ವಿರುದ್ಧ ಕಾಂಗ್ರೆಸ್​ ಪ್ರೊಟೆಸ್ಟ್

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿ ತೆರಿಗೆ ನ್ಯಾಯಕ್ಕಾಗಿ ಸರ್ಕಾರದಿಂದಲೇ ಕೇಂದ್ರದ  ಬೃಹತ್​ ಪ್ರತಿಭಟನೆ ನಡೆಯುತ್ತಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಜಂತ‌ರ್ ಮಂತರ್‌ನಲ್ಲಿ ಕಾಂಗ್ರೆಸ್‌ನ ಸಚಿವರು, ಶಾಸಕರು, ಸಂಸದರು ತೆರಿಗೆಗಾಗಿ ದೆಹಲಿ ಚಲೋ ಧರಣಿ ನಡೆಸುತ್ತಿದ್ದಾರೆ. ಇನ್ನೂ ಇವರು #ನನ್ನತೆರಿಗೆನನ್ನಹಕ್ಕು ಹ್ಯಾಶ್‌ಟ್ಯಾಗ್‌ ಮೂಲಕ  ಕೇಂದ್ರದ ವಿರುದ್ಧ ಸಿಡಿದೆದ್ದಿದ್ದಾರೆ.

ಕೇಂದ್ರ ಸರ್ಕಾರ ತೆರಿಗೆ ಪಾಲು, ಅನುದಾನ ಹಂಚಿಕೆ ಮತ್ತು ಬರ ಪರಿಹಾರ ನೀಡುವುದರಲ್ಲಿ ತೋರುತ್ತಿರುವ ಮಲತಾಯಿ ಧೋರಣೆ ಹಾಗೂ ಈ ವಿಚಾರ ದಲ್ಲಿ ರಾಜ್ಯಕ್ಕೆ ಸತತ ವಾಗಿ ಆಗುತ್ತಿರುವ ಭಾರೀ ಅನ್ಯಾಯ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ದೆಹಲಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಿದೆ.

ಶಬರಿಯಂತೆ ಕಾದರೂ ಬಾರದ ಬರ ಪರಿಹಾರ
ಸೆಪ್ಟೆಂಬರ್ 23 ರಂದು ಕೇಂದ್ರ ತಂಡ ಬಂದು ಬರಗಾಲ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಕೊಟ್ಟಿದೆ. ಬಳಿಕ ಶಬರಿ ಕಾದಂತೆ ನಮ್ಮ ಮಂತ್ರಿಗಳು ಭೇಟಿಗೆ ಕಾದು ವಾಪಾಸ್ ಬಂದಿದ್ದಾರೆ. ಭೇಟಿ ಮಾಡಿದಾಗ ಸಭೆ ಕರೆಯುತ್ತೇನೆ ಎಂದ ಅಮಿತ್ ಶಾ ಇವತ್ತಿನವರೆಗೂ ಸಭೆಯನ್ನೇ ಕರೆದಿಲ್ಲ. ಸಭೆ ಕರೆಯದೆ ಬರ ಪರಿಹಾರ ಬರುವುದೇ ಇಲ್ಲ.
ಅಮಿತ್ ಶಾ ಅವರು ಇವತ್ತಿನವರೆಗೂ ಪ್ರಾಥಮಿಕ ಸಭೆಯನ್ನೇ ಕರೆದಿಲ್ಲ. ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಬಂದಾಗಲೂ ಮನವಿ ಮಾಡಿದ್ದೆ. 35 ಸಾವಿರ ಕೋಟಿ ಬೆಳೆ ನಷ್ಟ ಆಗಿದೆ. ಇದಕ್ಕೆ 17,901 ಕೋಟಿ ರೂಪಾಯಿ ಪರಿಹಾರವನ್ನು ಕೇಂದ್ರದಿಂದ ಕೇಳಿದ್ದೇವೆ. NDRF ನಿಂದ ನಯಾ ಪೈಸೆ ಬಿಡುಗಡೆ ಮಾಡಿಲ್ಲ. 2019 ರಲ್ಲಿ ಪ್ರವಾಹ ಬಂದಾಗ CM ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ NDRF ಗಾಗಿ ಗೋಗರೆದರೂ ಪರಿಹಾರ ಕೊಡಲಿಲ್ಲ.

RELATED ARTICLES

Related Articles

TRENDING ARTICLES