Wednesday, January 22, 2025

ಕಾಂಗ್ರೆಸ್​ ಪ್ರತಿಭಟನೆಗೆ ಕೌಂಟರ್​: ವಿಧಾನಸೌಧದ ಮುಂಭಾಗ ಕಾಂಗ್ರೆಸ್​ ವಿರುದ್ದ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ತೆರಿಗೆಯ ಪಾಲು ಸಮರ್ಪಕವಾಗಿ ನೀಡದ ಕಾರಣ ಬಿಜೆಪಿ ವಿರುದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೆ ರಾಜ್ಯ ಬಿಜೆಪಿ ಪಕ್ಷದ ಮುಖಂಡರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ.

ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ. ಬೆಳಿಗ್ಗೆ 11 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದರು.

ಇದನ್ನೂ ಓದಿ: ಬಿಜೆಪಿಗೆ ಮತ ಹಾಕಿದರೆ ರಾಮನಿಗೆ ಮತ ನೀಡಿದಂತೆ: ಮಾಜಿ ಸ್ಪೀಕರ್​ ಕಾಗೇರಿ

‘ರೈತರಿಗೆ ಬರ ಪರಿಹಾರ ನೀಡದ, ಅಭಿವೃದ್ಧಿ ವಿರೋಧಿ, ಜನ ವಿರೋಧಿ ರಾಜ್ಯ ಸರ್ಕಾರವಿದು. ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲೂ ಸರ್ಕಾರ ತಾರತಮ್ಯ ಮಾಡುತ್ತಿದೆ. ಕಾಂಗ್ರೆಸ್ ಶಾಸಕರಿಗೆ ₹25 ಕೋಟಿ ಅನುದಾನ ನೀಡಿ, ಬಿಜೆಪಿ ಶಾಸಕರಿಗೆ ಏನೂ ಕೊಡದ ಬೇಜಾವಾಬ್ದಾರಿ ಸರ್ಕಾರ. ರೈತರಿಗೂ ಏನೂ ಕೊಡದೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಿದ್ದರಾಮಯ್ಯ ಮತ್ತು ಅವರ ನೇತೃತ್ವದ ಸರ್ಕಾರ ಜನರ ಹಣ ಲೂಟಿ ಮಾಡುತ್ತಿದೆ’ ಎಂದು ಪ್ರತಿಭಟನೆ ನಿರತರು ದಿಕ್ಕಾರ ಕೂಗಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಎಸ್‌ಸಿ, ಎಸ್‌ಟಿ ನಿಧಿಯ ಹಣವನ್ನು ಅನ್ಯ ಉದ್ದೇಶಕ್ಕೆ ರಾಜ್ಯ ಸರ್ಕಾರ ಬಳಸುತ್ತಿದೆ. ಇದು ದಲಿತ ವಿರೋಧಿ ಸರ್ಕಾರ. ದೇಶ ವಿಭಜನೆ ಮಾಡಲು ದೆಹಲಿಗೆ ಕಾಂಗ್ರೆಸ್ ನಾಯಕರು ತೆರಳಿದ್ದಾರೆ. ಸಿದ್ದರಾಮಯ್ಯ ಅವರು ಮಜಾವಾದಿ. ರಾಜ್ಯದ ಹಣ ಲೂಟಿ ಮಾಡುತ್ತಿದ್ದಾರೆ’ ಎಂದೂ ಘೋಷಣೆಗಳನ್ನು ಕೂಗಿದರು.

ಶಾಸಕರಾದ ಬಸವರಾಜ ಬೊಮ್ಮಾಯಿ, ಅರವಿಂದ ಬೆಲ್ಲದ್, ರವಿಸುಬ್ರಹ್ಮಣ್ಯ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ನವೀನ್, ಭಾರತಿ ಶೆಟ್ಟಿ ಹೀಗೆ ಬಿಜೆಪಿಯ ಬಹುತೇಕ ಎಲ್ಲ ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

RELATED ARTICLES

Related Articles

TRENDING ARTICLES