ನವದೆಹಲಿ: ಕಳೆದ ಐದಾರು ವರ್ಷಗಳಲ್ಲಿ ನ್ಯಾಯಯುತವಾಗಿ ಬರಬೇಕಾಗಿದ್ದ 1,87,000 ಕೋಟಿ ರೂ.ಗಳಷ್ಟು ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ ಎಂದು ಆಹಾರ ನಾಗರೀಕ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್ ಮುನಿಯಪ್ಪ ನವರು ತಿಳಿಸಿದರು.
ಇದನ್ನೂ ಓದಿ: ನಮ್ಮ ಪ್ರತಿಭಟನೆ ಕನ್ನಡಿಗರ ಹಿತ ಕಾಪಾಡುವ ಚಳುವಳಿ: ಸಿಎಂ ಸಿದ್ದರಾಮಯ್ಯ!
ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಮಾಡಿರುವ ಅನ್ಯಾಯದ ವಿರುದ್ಧ ನವದೆಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಜನತೆಗೆ ಆಗುತ್ತುರುವ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ದೆಹಲಿಯ ಜಂತರ್ ಮಂತರ್ ನಡೆಸುತ್ತಿದ್ದೇವೆ, ಈ ಜಾಗ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಇದು ರಾಜಕೀಯ ಚಳವಳಿ ಅಲ್ಲ. ಕೇಂದ್ರ ಸರ್ಕಾರದ ವಿರುದ್ಧದ ಈ ಹೋರಾಟವನ್ನು ಪಕ್ಷಾತೀತವಾಗಿ ಮಾಡಲಾಗುತ್ತಿದೆ ಎಂದರು.
ನಮ್ಮ ದಕ್ಷಿಣದ ರಾಜ್ಯಗಳಿಂದ ಅತ್ಯಧಿಕ ತೆರಿಗೆಯನ್ನು ಕೇಂದ್ರಕ್ಕೆ ನಾವು ಸಲ್ಲಿಸುತ್ತಿದ್ದರೇ ನಮಗೆ ಬರಬೇಕಾದ ತೆರಿಗೆಯ ಪಾಲನ್ನು ಉತ್ತರಪ್ರದೇಶ ರಾಜ್ಯಕ್ಕೆ 2,80,000 ಕೋಟಿ ರೂ. ಬಿಹಾರ, ಮಧ್ಯಪ್ರದೇಶ, ರಾಜಸ್ಥಾನಕ್ಕೂ ನೀಡಲಾಗುತ್ತಿದೆ ಎಂದು ಅವರು ಆಕ್ರೋಶ ಹೊರ ಹಾಕಿದರು.