ಬೆಂಗಳೂರು : ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಹುಕ್ಕಾ ತಂಬಾಕು, ನಿಕೋಟಿನ್ ಒಳಗೊಂಡ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ ಹಾಗೂ ಶಿಶಾ ಸೇರಿ ಇನ್ನಿತರ ಮಾದರಿಯ ಹುಕ್ಕಾ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ.
ಸರ್ಕಾರದ ಆದೇಶ ಉಲ್ಲಂಘಿಸಿ ಮಾರಾಟ ಮಾಡಿದ್ದಲ್ಲಿ COTPA 2003, 2015ರ ಕಾಯ್ದೆ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ. 13 ರಿಂದ 29 ವರ್ಷದ ಯುವಕರು ತಂಬಾಕು ಬಳಸುವ ಹುಕ್ಕಾಗೆ ಬಲಿಯಾಗುತ್ತಿದ್ದಾರೆ ಎಂದು ತಿಳಿದುಬಂದಿದೆ.
ಆದೇಶದಲ್ಲಿರುವ ಪ್ರಮುಖ ಅಂಶಗಳಿವು
- ರಾಜ್ಯದಲ್ಲಿ ಹುಕ್ಕಾ ಸೇವನೆ ಹಾಗೂ ಮಾರಾಟ ಬ್ಯಾನ್
- 45 ನಿಮಿಷದ ಹುಕ್ಕಾ ಸೇವನೆ ನೂರು ಸಿಗರೇಟ್ ಸೇವನೆಗೆ ಸಮ
- ಹುಕ್ಕಾದ ಎಲ್ಲ ಬಗೆಯ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಸೇವನೆಗೆ ಪ್ರಚೋದನೆ, ಸಂಗ್ರಹಣೆ ನಿಷೇಧ
- ಆರೋಗ್ಯ ಇಲಾಖೆಯಿಂದ ತಕ್ಷಣ ಜಾರಿಗೆ ಬರುವಂತೆ ಹುಕ್ಕಾ ಬ್ಯಾನ್ ಮಾಡಿ ಆದೇಶ
- ರಾಜ್ಯ ಆರೋಗ್ಯ ಇಲಾಖೆ ಆಧೀನ ಕಾರ್ಯದರ್ಶಿ ಪದ್ಮಾ ವಿ ಆದೇಶ
- ಸಾರ್ವಜನಿಕರ ಆರೋಗ್ಯ ಕಾಪಾಡುವುದಕ್ಕೆ ಸಂವಿಧಾನದ 47ನೇ ವಿಧಿ ಪ್ರಕಾರ ಈ ಆದೇಶ
- ನಿಕೋಟಿನ್ ಹಾಗೂ ನಿಕೋಟಿನ್ ರಹಿತ ಹುಕ್ಕಾ, ಸ್ವಾದಭರಿತ, ಮೊಲಾಸಿಸ್, ಶಿಶಾ ಒಳಗೊಂಡ ಹುಕ್ಕಾ ನಿಷೇಧ
- ಆದೇಶ ಉಲ್ಲಂಘಿಸಿದವರ ವಿರುದ್ಧ ಕೋಟ್ಪಾ ಕಾಯ್ದೆ, ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯ್ದೆ,
- ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಕರ್ನಾಟಕ ವಿಷ ಕಾಯ್ದೆ, ಭಾರತೀಯ ದಂಡ ಸಂಹಿತೆ
- ಅಗ್ನಿ ನಿಯಂತ್ರಣ ಮತ್ತು ಸುರಕ್ಷತಾ ಕಾಯ್ದೆಗಳ ಅಡಿಯಲ್ಲಿ ಕ್ರಮ
- ಕೋಟ್ಪಾ ಕಾಯ್ದೆಯಡಿ ಹುಕ್ಕಾವನ್ನು ತಂಬಾಕು ಎಂದು ಪರಿಗಣಿಸಲಾಗಿದೆ
- ವಿಶ್ವ ಆರೋಗ್ಯ ಸಂಸ್ಥೆಯು ಹುಕ್ಕಾವನ್ನು ವ್ಯಸನಕಾರಿ ಉತ್ಪನ್ನ ಎಂದು ಘೋಷಣೆ
- ಹುಕ್ಕಾ ಸೇವನೆಯು ಆರೋಗ್ಯಕ್ಕೆ ಅತ್ಯಂತ ಮಾರಕ. ಹುಕ್ಕಾ ಬಾರ್‌ಗಳು ಅಗ್ನಿ ಅನಾಹುತಗಳಿಗೆ ಕಾರಣವಾಗುತ್ತಿದೆ