Wednesday, January 22, 2025

ನಮ್ಮ ಪ್ರತಿಭಟನೆ ಕನ್ನಡಿಗರ ಹಿತ ಕಾಪಾಡುವ ಚಳುವಳಿ: ಸಿಎಂ ಸಿದ್ದರಾಮಯ್ಯ!

ನವದೆಹಲಿ : ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದಿಂದ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ಕರ್ನಾಟಕದ ಪರವಾಗಿ ಕರ್ನಾಟಕದ ಜನತೆಯ ಪರವಾಗಿ ನಾವಿಂದು ಪ್ರತಿಭಟಿಸುವುದು  ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ನವದೆಹಲಿಯ ಜಂತರ್ ಮಂತರ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು. ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದರು.

ಇದನ್ನೂ ಓದಿ : ಕಾಂಗ್ರೆಸ್​ ಪ್ರತಿಭಟನೆಗೆ ಕೌಂಟರ್​: ವಿಧಾನಸೌಧದ ಮುಂಭಾಗ ಕಾಂಗ್ರೆಸ್​ ವಿರುದ್ದ ಬಿಜೆಪಿ ಪ್ರತಿಭಟನೆ

ಕಳೆದ ಐದಾರು ವರ್ಷಗಳಲ್ಲಿ ₹1,87,000 ಕೋಟಿ ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ. ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ. ಜಂತರ್ ಮಂತರ್ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಇದು ರಾಜಕೀಯ ಚಳವಳಿ ಅಲ್ಲ. ಕೇಂದ್ರ ಸರ್ಕಾರದ ವಿರುದ್ಧದ ಈ ಹೋರಾಟವನ್ನು ಪಕ್ಷಾತೀತವಾಗಿ

14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು 4.71 % ಬಂದಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಇಳಿಯಿತು. ಇದರಿಂದ ರಾಜ್ಯಕ್ಕೆ ಬರುವ ತೆರಿಗೆಯಲ್ಲಿ ಶೇ. 40 ರಿಂದ 45 ರವರೆಗೆ ಕಡಿತವಾಗಿದೆ. ಒಟ್ಟಾರೆಯಾಗಿ 14 ನೇ ಹಣಕಾಸು ಆಯೋಗದ ಶಿಫಾರಸ್ಸನ್ನೇ 15 ನೇ ಹಣಕಾಸು ಆಯೋಗದಲ್ಲಿ ಅನುಸರಿಸಿದ್ದರೆ, ರಾಜ್ಯಕ್ಕೆ ₹62,098 ಕೋಟಿ ರಾಜ್ಯಕ್ಕೆ ಬರುತ್ತಿತ್ತು.

ರಾಜ್ಯದಿಂದ ಒಟ್ಟು ₹4,30,000 ಕೋಟಿ ತೆರಿಗೆ ಮೊತ್ತವನ್ನು ಕೇಂದ್ರಕ್ಕೆ ನೀಡಲಾಗುತ್ತದೆ. ಅಂದರೆ 100 ರೂಪಾಯಿ ತೆರಿಗೆಯಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂಪಾಯಿ ದೊರೆಯುತ್ತಿದೆ. ಇದು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ.

ಕರ್ನಾಟಕದಿಂದ 25 ಸಂಸದರು ಆಯ್ಕೆಯಾಗಿದ್ದು, ಒಬ್ಬರೂ ಈ ಬಗ್ಗೆ ಕೇಂದ್ರ ಮುಂದೆ ಮಾತನಾಡಿಲ್ಲ. ಅಲ್ಲದೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿಯವರು ಈ ಅನ್ಯಾಯವನ್ನು ಸರಿಪಡಿಸುವ ಮನವಿ ಮಾಡಿರುವುದಿಲ್ಲ. ಈ ಎಲ್ಲ ಕಾರಣಗಳಿಗಾಗಿ ಇಂದು ನವದೆಹಲಿಯಲ್ಲಿ ಹೋರಾಟ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

RELATED ARTICLES

Related Articles

TRENDING ARTICLES