Sunday, December 22, 2024

ಬೆಳಗಾವಿ ಜನತೆಗೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರ ಬೆಳಗಾವಿ ಜನತೆಗೆ ಮತ್ತೊಂದು ಗುಡ್​ ನ್ಯೂಸ್ ಕೊಟ್ಟಿದೆ. ಬೆಳಗಾವಿ-ಪುಣೆ ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಒಪ್ಪಿಗೆ ನೀಡಲಾಗಿದೆ.

ಈ ಕುರಿತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಟ್ವೀಟ್​ ಮಾಡಿದ್ದಾರೆ. ಬೆಳಗಾವಿ-ಪುಣೆ ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಕೇಂದ್ರ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಪ್ರಾರಂಭಿಸುವ ಕುರಿತು ಚರ್ಚಿಸಲಾಯಿತು. ಸಚಿವರು ವಿದ್ಯುದ್ದೀಕರಣ ಕಾಮಗಾರಿ ಮುಕ್ತಾಯದ ನಂತರ ಬಿಡುವ ವ್ಯವಸ್ಥೆ ಮಾಡಲಾಗುವುದು ಎಂದು ಲಿಖಿತವಾಗಿ ಪತ್ರದ ಮೂಲಕ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ನನ್ನ ಮನವಿಗೆ ಸ್ಪಂದಿಸಿ ಶೀಘ್ರ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ವ್ಯವಸ್ಥೆ ಮಾಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಹಾಗೂ ರೈಲ್ವೆ ಇಲಾಖೆಗೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳು ಎಂದು ಈರಣ್ಣ ಕಡಾಡಿ ಪೋಸ್ಟ್ ಮಾಡಿದ್ದಾರೆ.

ರಾಜ್ಯದ ರೈಲ್ವೆ ಯೋಜನೆಗೆ 7,524 ಕೋಟಿ

ರಾಜ್ಯದ ವಿವಿಧ ರೈಲ್ವೆ ಯೋಜನೆಗಳಿಗಾಗಿ ಕೇಂದ್ರ ಸರ್ಕಾರ ಒಟ್ಟು 7,524 ಕೋಟಿ ರೂ. ಅನುದಾನ ಘೋಷಿಸಿದೆ. ರಾಜ್ಯದ ರೈಲ್ವೆ ಮೂಲಸೌಲಭ್ಯ ಹಾಗೂ ಸಂಪರ್ಕ ವಿಸ್ತರಣೆಗಾಗಿ 2,286 ಕೋಟಿ ರೂ., ಡಬ್ಲಿಂಗ್ ಹಾಗೂ ಹೊಸ ಮಾರ್ಗಗಳ ಅನುಷ್ಠಾನಕ್ಕಾಗಿ 1,531 ಕೋಟಿ ರೂ. ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು 987 ಕೋಟಿ ರೂ. ಅನುದಾನ ಕಲ್ಪಿಸಲಾಗಿದೆ.

RELATED ARTICLES

Related Articles

TRENDING ARTICLES