Saturday, November 9, 2024

ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆ!

ಇಸ್ಲಾಮಾಬಾದ್​ : ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ಸುಮಾರು 12.85 ಕೋಟಿ ಜನರು ಹೊಸ ಸರ್ಕಾರ ರಚಿಸಲು ಮತ ಚಲಾಯಿಸಲಿದ್ದಾರೆ. ಚುನಾವಣೆಯನ್ನು ಸುರಕ್ಷಿತವಾಗಿ ನಡೆಸಲು ದೇಶಾದ್ಯಂತ ಸುಮಾರು ಆರೂವರೆ ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮುಂಚೂಣಿಯಲ್ಲಿರುವ ಪಕ್ಷದ ನಾಯಕರಾದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಪ್ರಬಲ ಸೇನೆಯು ಬೆಂಬಲಿಸುತ್ತದೆ ಎಂದು ನಂಬಲಾಗಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪ್ರಸ್ತುತ ಜೈಲಿನಲ್ಲಿರುವುದರಿಂದ, ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ.

ಇದನ್ನೂ ಓದಿ: ಶಾಲಾ ಮಕ್ಕಳಿಗೆ ಸಿಹಿಸುದ್ದಿ: ವಾರದಲ್ಲಿ 3 ದಿನ ರಾಗಿಮಾಲ್ಟ್ ನೀಡಲು ತೀರ್ಮಾನ!

ಸಾರ್ವತ್ರಿಕ ಚುನಾವಣೆಯಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್), ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಮತ್ತು ಬಿಲಾವಲ್ ಭುಟ್ಟೊ ಜರ್ದಾರಿ ನೇತೃತ್ವದ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ನಡುವೆ ಪೈಪೋಟಿ ಏರ್ಪಟ್ಟಿದೆ. ಆದರೆ, ಮಾಜಿ ಪ್ರಧಾನಿ ನವಾಜ್ ಷರೀಫ್ ನೇತೃತ್ವದ ಪಿಎಂಎಲ್-ಎನ್ ಪಕ್ಷಕ್ಕೆ ಹೆಚ್ಚಿನ ಬೆಂಬಲ ಇರುವುದರಿಂದ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ಹೊಂದಿದೆ.

ಪಾಕಿಸ್ತಾನದ ಚುನಾವಣಾ ಆಯೋಗದ ಪ್ರಕಾರ ಇಂದು (ಗುರುವಾರ) ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ರಾಷ್ಟ್ರೀಯ ಅಸೆಂಬ್ಲಿಗಾಗಿ ಒಟ್ಟು 12,85,85,760 ನೋಂದಾಯಿತ ಮತದಾರರು 5,121 ಅಭ್ಯರ್ಥಿಗಳಿಗೆ ಮತ ಚಲಾಯಿಸಲಿದ್ದಾರೆ ಎಂದು ಹೇಳಲಾಗಿದೆ, ಅಭ್ಯರ್ಥಿಗಳ ಪೈಕಿ 4,807 ಪುರುಷರು, 570 ಮಹಿಳೆಯರು ಮತ್ತು ಇಬ್ಬರು ತೃತೀಯಲಿಂಗಿಗಳಿದ್ದಾರೆ.

RELATED ARTICLES

Related Articles

TRENDING ARTICLES