ಬೆಂಗಳೂರು: ನಾಗರಿಕರ ಅಹವಾಲುಗಳನ್ನು ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ಅವರು ಫೆಬ್ರುವರಿ 8ರಂದು ವಿಧಾನಸೌಧ ಮುಂಭಾಗ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದ್ದಾರೆ.
ಇದು ಹಾಲಿ ಸರ್ಕಾರ ಆಯೋಜಿಸುತ್ತಿರುವ 2ನೇ ಹಂತದ ರಾಜ್ಯಮಟ್ಟದ ಜನಸ್ಪಂದನಾ ಕಾರ್ಯಕ್ರಮವಾಗಿದೆ. ಸಾರ್ವಜನಿಕರು ಭಾಗಿಯಾಗಿ ತಮ್ಮ ಅಹವಾಲು ಸಲ್ಲಿಸುವಂತೆ ಸರ್ಕಾರ ಪ್ರಕಟಣೆಯಲ್ಲಿ ಈ ಹಿಂದೆಯೇ ತಿಳಿಸಿತ್ತು.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಅಹವಾಲು ಸಲ್ಲಿಕೆಗೆ ನೋಂದಾಯಿಸಲು 1902 ಡಯಲ್ ಮಾಡಬಹುದು ಎಂದು ಹೇಳಿತ್ತು. ವಿಧಾನಸೌಧ ಮುಂಭಾಗ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಕಾಲದಲ್ಲಿ ಪರಿಹಾರ ಕಂಡುಕೊಳ್ಳಬಹುದು ಎಂದು ಸರ್ಕಾರ ಹೇಳಿದೆ. ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಬೇಕು ಎಂದು ಸೂಚನೆ ನೀಡಲಾಗಿದೆ.
ಫೆಬ್ರವರಿ 08ರ ಗುರುವಾರ ಮುಖ್ಯಮಂತ್ರಿ @siddaramaiah ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವು ವಿಧಾನಸೌಧದ ಮುಂಭಾಗ ನಡೆಯಲಿದೆ.
ಜನಸ್ಪಂದನಕ್ಕೆ ಆಗಮಿಸುವವರಿಗೆ ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದ ವರೆಗೆ ಹೋಗಲು ಮತ್ತು ಬರಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು… pic.twitter.com/TABRt4RElL
— CM of Karnataka (@CMofKarnataka) February 6, 2024
ವೈದ್ಯಕೀಯ, ಕಂದಾಯ, ಪೊಲೀಸ್, ಪಹಣಿ, ಖಾತೆ, ಸರ್ವೆ, ಪೋಡಿ, ಅನ್ಯಾಯ ಹೀಗೆ ಯಾವುದೇ ವಿಚಾರಗಳಿರಲಿ, ತುರ್ತಾಗಿ ಸೂಕ್ತ ಪರಿಹಾರ ಸಿಗಲಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ
ಜನಸ್ಪಂದನಾ ಕಾರ್ಯಕ್ರಮಕ್ಕಾಗಿ ವಿಧಾನ ಸೌಧದ ಸುತ್ತಲೂ ಭರದ ಸಿದ್ಧತೆ ನಡೆಯುತ್ತಿದೆ. ಅಧಿಕಾರಿಗಳು, ಸಾರ್ವಜನಿಕರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರ್ವಜನಿಕರಿಗೂ ಅನುಕೂಲ ಆಗುವಂತೆ ಆಸನ ವ್ಯವಸ್ಥೆ ಮಾಡಲಾಗಿದೆ. ಬೃಹತ್ ಶಾಮಿಯಾನ ಹಾಕಿ ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.