Monday, December 23, 2024

ನಾಯಕತ್ವದ ಎಫೆಕ್ಟ್​: ಇನ್ಸ್​ಟಾಗ್ರಾಮ್​ನಲ್ಲಿ ರೋಹಿತ್-ಹಾರ್ದಿಕ್ ಒಬ್ಬರನ್ನೊಬ್ಬರು ಅನ್​ ಫಾಲೋ!

ಮುಂಬೈ: ಟೀಂ ಇಡಿಯಾದ ನಾಯಕ ರೋಹಿತ್ ಶರ್ಮ ಹಾಗು ಆಲ್​ ರೌಂಡರ್ ಹಾರ್ದಿಕ್​ ಪಾಂಡ್ಯ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದ್ದು ಈ ಇಬ್ಬರು ಆಟಗಾರರು ತಮ್ಮ ತಮ್ಮ ಸಾಮಾಜಿಕ ಜಾಲತಾಣವಾದ ಇನ್ಸ್​ಸ್ಟಾಗ್ರಾಂ ನಲ್ಲಿ ಪರಸ್ಪರ ಅನ್​ ಫಾಲೋ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

2024ರ ಐಪಿಎಲ್ ಆರಂಭಕ್ಕೂ ಮೊದಲು ಮುಂಬೈ ಇಂಡಿಯನ್ಸ್ ಫ್ರಾಂಚೈಸ್ ತಂಡದಲ್ಲಿ ಹಲವು ಬದಲಾವಣೆಗಳನ್ನು ಮಾಡಿದೆ. ಅದರಂತೆ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಅವರ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಇದನ್ನೂ ಓದಿ: ಒಂದು ತಿಂಗಳೊಳಗೆ ಜನ ಸ್ಪಂದನೆ ಅಹವಾಲುಗಳನ್ನು ಬಗೆಹರಿಸಿ: ಸಿಎಂ ಖಡಕ್​ ಸೂಚನೆ

ಕಳೆದೆರಡು ಆವೃತ್ತಿಗಳಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವವಹಿಸಿಕೊಂಡಿದ್ದ ಪಾಂಡ್ಯರನ್ನು ಮುಂಬೈ ತಂಡದ ಪರ ಆಡಲು ಖರೀದಿ ಮಾಡಿಕೊಳ್ಳಲಾಗಿತ್ತು. ಆ ಬಳಿಕ ಅವರಿಗೆ ತಂಡದ ನಾಯಕತ್ವವನ್ನು ಹಸ್ತಾಂತರಿಸಲಾಗಿತ್ತು. ತಂಡದ ಆಡಳಿತ ಮಂಡಳಿಯ ಈ ನಿರ್ಧಾರಕ್ಕೆ ರೋಹಿತ್ ಶರ್ಮಾ ಅಭಿಮಾನಿಗಳು ಕೆಂಡಕಾರಿದ್ದರು. ಇದಾದ ನಂತರ ಹಾರ್ದಿಕ್ ಪಾಂಡ್ಯ ಹಾಗೂ ರೋಹಿತ್ ಶರ್ಮಾ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವದಂತಿಯೂ ಹರಿದಾಡಿತ್ತು. ಇದೀಗ ಹೊಸ ಗಾಳಿ ಸುದ್ದಿಯೊಂದು ಹರಿದಾಡುತ್ತಿದ್ದು, ರೋಹಿತ್ ಮತ್ತು ಹಾರ್ದಿಕ್ ಪಾಂಡ್ಯ ತಮ್ಮ ಇನ್‌ಸ್ಟಾಗ್ರಾಮ್‌ನಿಂದ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

RELATED ARTICLES

Related Articles

TRENDING ARTICLES