Wednesday, January 22, 2025

ಒಂದು ತಿಂಗಳೊಳಗೆ ಜನ ಸ್ಪಂದನೆ ಅಹವಾಲುಗಳನ್ನು ಬಗೆಹರಿಸಿ: ಸಿಎಂ ಖಡಕ್​ ಸೂಚನೆ

ಬೆಂಗಳೂರು: ಇಂದು ನಡೆದ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕಾರವಾದ ಅಹ್ವಾಲುಗಳನ್ನು ಸಂಬಂಧಿಸಿದ ಜಿಲ್ಲೆಗಳ ಅಧಿಕಾರಿಗಳು ಒಂದು ತಿಂಗಳ ಒಳಗೆ ಪರಿಹರಿಸುವಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಇಂದು ನಡೆದ ರಾಜ್ಯ ಮಟ್ಟದ ಜನಸ್ಪಂದನಾ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಾರ್ವಜನಿಕರು ತಮ್ಮ ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಹಿಡಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಇವರ ಸಮಸ್ಯೆಗಳನ್ನು ಆಲಿಸಿದ ಸಿಎಂ, ಸಮಸ್ಯೆಗಳಿಗೆ ಸಂಬಂಧಿಸಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಒಂದು ತಿಂಗಳೊಳಗಾಗಿ ಇತ್ಯರ್ಥಪಡಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ​ ಅಕ್ರಮವಾಗಿ ಮಾರಟ ಮಾಡಿದ ಶಿಕ್ಷಕ ಅಮಾನತು!

ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ಇಂದಿನ ಜನತಾ ದರ್ಶನದಲ್ಲಿ ರಾಜ್ಯಾದ್ಯಂತ ಒಟ್ಟು 20 ಸಾವಿರ ಮಂದಿ ಭೇಟಿ ಮಾಡಿ 11 ಸಾವಿರ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಈ ಹಿಂದೆ ನಡೆದ ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ, ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. DC, CEO ಗಳ ಮೇಲೆ ಈ ಜವಾಬ್ದಾರಿ ಹೆಚ್ಚು ಎಂದು ಸಿಎಂ ಅವರು ಹೇಳಿದರು.

ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡ್ತೇನೆ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಸಿ ಎನ್ನುವ ಎಚ್ಚರಿಕೆ ಕೊಡುತ್ತೇನೆ. ಜನರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES