Wednesday, January 22, 2025

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದು ಆಕ್ರೋಶ!

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ವಿರೋಧಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮಸಿ ಬಳಿದ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ನಿರ್ಮಲಾ ಸೀತಾರಾಮನ್ ಕಚೇರಿಯ ನಾಮಫಲಕಕ್ಕೆ ಮಸಿ ಬಳಿಯಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸೂರಜ್, ಲಕ್ಷ್ಯ ರಾಜ್, ನಿಶ್ಚಯ್ ಗೌಡ, ನರೇಶ್, ಕಾರ್ತಿಕ್ ಸೇರಿ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ನಾನು ಪಾರ್ಲಿಮೆಂಟ್‌ ಸದಸ್ಯತ್ವ ಕೇಳಿದ್ದೀನಿ: ವಿ ಸೋಮಣ್ಣ

ಕೇಂದ್ರ ಸರ್ಕಾರ ಬಜೆಟ್​ನಲ್ಲಿ ರಾಜ್ಯಕ್ಕೆ ಸಿಗಬೇಕಾದ ಪಾಲು ಸಮರ್ಪಕವಾಗಿ ಹಂಚಿಕೆ ಮಾಡದೇ ಅನ್ಯಾಯ ಮಾಡುತ್ತಿದ್ದರು ಪ್ರಧಾನಿಗಳ ಬಳಿ ರಾಜ್ಯದ ಬಿಜೆಪಿ ಸಂಸದರಾಗಲಿ ಮುಖಂಡರಾಗಲಿ ಮಾತನಾಡದೇ ಮೌನವಾಗಿದ್ದಾರೆ ಎಂದು ಕಾರ್ಯಕರ್ತರು ಬಿಜೆಪಿ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES