Monday, December 23, 2024

ವಿರಾಟ್ ಕೊಹ್ಲಿ ತಂದೆ ಆಗುತ್ತಿಲ್ಲ : ಎಬಿಡಿ ಯೂಟರ್ನ್

ಬೆಂಗಳೂರು : ವಿರಾಟ್ ಕೊಹ್ಲಿ ತಂದೆಯಾಗುತ್ತಿಲ್ಲ ಎನ್ನುವ ಮೂಲಕ ಆರ್​ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​ ಯೂಟರ್ನ್​ ಹೊಡೆದಿದ್ದಾರೆ.

ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳ ಬಗ್ಗೆ ಸುಳ್ಳು ಮಾಹಿತಿ ಹಂಚಿಕೊಳ್ಳುವ ಮೂಲಕ ನಾನು ದೊಡ್ಡ ತಪ್ಪು ಮಾಡಿದ್ದೇನೆ. ವಿರಾಟ್ ವಿರಾಮ ಯಾಕೆ ತೆಗೆದುಕೊಂಡಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ ಎಂದು ಎಬಿ ಡಿ ವಿಲಿಯರ್ಸ್ ಹೇಳಿದ್ದಾರೆ.

ವಿರಾಟ್ ಕೊಹ್ಲಿಗೆ ಅವರ ಕುಟುಂಬ ಮೊದಲ ಆದ್ಯತೆಯಾಗಿದೆ. ಅದೇ ವೇಳೆ ನಾನು ದೊಡ್ಡ ತಪ್ಪು ಮಾಡಿದ್ದೇನೆ. ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದೇನೆ. ಅದು ನಿಜವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ವಿರಾಟ್ ಕೊಯ್ಲಿ ಮತ್ತು ಅನುಷ್ಕಾ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವುದು ಸುಳ್ಳೋ? ನಿಜವೋ? ತಮಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ವಿರುಷ್ಕಾ ಅಭಿಮಾನಿಗಳಿಗೆ ನಿರಾಸೆ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ, ವೈಯಕ್ತಿಕ ಕಾರಣಗಳನ್ನು ನೀಡಿ ದಿಢೀರ್ ಆಗಿ ಸರಣಿಯಿಂದ ಹಿಂದೆ ಸರಿದಿದ್ದರು. ವಿರಾಟ್ ವಿಶ್ರಾಂತಿಯ ಬಗ್ಗೆ ಹಲವು ಊಪಾಪೋಹಗಳು ಎದ್ದಿದ್ದವು.

ಈ ಕುರಿತು ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಹೇಳಿಕೆ ನೀಡಿದ್ದ ಎಬಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹೇಳಿದ್ದರು. ಇದರಿಂದ ವಿರುಷ್ಕಾ ಅಭಿಮಾನಿಗಳು ಫುಲ್ ಖುಷ್​ ಆಗಿದ್ದರು. ಆದರೆ, ಇದೀಗ ಎಬಿಡಿ ಯೂಟರ್ನ್​ ಹೊಡೆದಿದ್ದಾರೆ.

RELATED ARTICLES

Related Articles

TRENDING ARTICLES