Wednesday, December 25, 2024

ಆಪರೇಷನ್​ ಥಿಯೇಟರ್​​ನಲ್ಲಿ ಡಾಕ್ಟರ್ ಪ್ರೀ ವೆಡ್ಡಿಂಗ್ ಫೋಟೋಶೂಟ್: ವಿಡಿಯೋ ವೈರಲ್

ಚಿತ್ರದುರ್ಗ: ಆಪರೇಷನ್​ ಥಿಯೇಟರ್​​ನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ನಡೆಸಿ ಚಿತ್ರದುರ್ಗ ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯ ಡಾ.ಅಭಿಷೇಕ್ ಎಡವಟ್ಟು ಮಾಡಿಕೊಂಡಿದ್ದಾರೆ.

ಭರಮಸಾಗರ ಮೂಲದ ವೈದ್ಯ ಡಾ.ಅಭಿಷೇಕ್ ಗುತ್ತಿಗೆ ಅಧಾರದಲ್ಲಿ ಕೆಲಸ ಮಾಡುತ್ತಿದ್ದು, ಈ ನಡುವೆ ಆಪರೇಷನ್ ಥಿಯೇಟರ್ ನಲ್ಲಿ ಫ್ರೀ ವೆಡ್ಡಿಂಗ್ ವಿಡಿಯೋ ಶೂಟ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್ ಆಗಿದ್ದು, ವೈದ್ಯರ ನಡೆಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯ ದುರ್ಬಳಕೆ

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿದ್ದು, ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ವಿಡಿಯೋ ಶೂಟ್ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಡಾ.ಅಭಿಷೇಕ್ ಜೋಡಿ ಬಗ್ಗೆ ಹಲವರು ಬೇಸರ ಹೊರ ಹಾಕಿದ್ದಾರೆ.

ವಿಡಿಯೋದಲ್ಲಿ ಏನಿದೆ..? 

ವಿಡಿಯೋದಲ್ಲಿ ವೈದ್ಯ ಅಭಿಷೇಕ್ ಆಪರೇಷನ್ ಮಾಡುತ್ತಿರುವಂತೆ, ಈ ವೇಳೆ ಆತನಿಗೆ ಭಾವಿ ಪತ್ನಿ ಸಹಾಯ ಮಾಡುವಂತೆ ಚಿತ್ರೀಕರಣ ಮಾಡಲಾಗಿದೆ. ಕೆಲವೇ ಸೆಕೆಂಡ್​ಗಳ ವಿಡಿಯೋ ಕೊನೆಗೆ ಆಪರೇಷನ್​ ಮಾಡಿಸಿಕೊಳ್ಳುತ್ತಿರುವಂತೆ ಮಲಗಿದ್ದ ರೋಗಿ ಎದ್ದು ಕೂರುವುದನ್ನು ಕಾಣಬಹುದಾಗಿದೆ. ಇತ್ತೀಚೆಗೆ ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಜೋಡಿಗಳು ಪ್ರೀ ವೆಡ್ಡಿಂಗ್ ಫೋಟೋ ಶೂಟ್​ ಮಾಡುವುದು ಸಾಮಾನ್ಯ ಸಂಗತಿಯಾಗಿದ್ದು, ಹೊಸ ಹೊಸ ಥಿಮ್​​ಗಳೊಂದಿಗೆ ಶೂಟ್​ಗಳನ್ನು ನಡೆಸುವುದನ್ನು ನೋಡುತ್ತಿರುವುತ್ತೇವೆ. ಆದರೆ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯ ಆಪರೇಷನ್ ಥಿಯೇಟರ್​​ಅನ್ನು ದುರ್ಬಳಕೆ ಮಾಡಿಕೊಂಡಿರುವುದು ಎಷ್ಟು ಸರಿ ಎಂದು ಹಲವು ಪ್ರಶ್ನೆ ಮಾಡ್ತಿದ್ದಾರೆ.

 

RELATED ARTICLES

Related Articles

TRENDING ARTICLES