Sunday, December 22, 2024

ವಾಲ್ಮೀಕಿ ಸಮಾಜದ ಮೀಸಲಾತಿ ಹೆಚ್ಚಳಕ್ಕೆ ಕುಮಾರಸ್ವಾಮಿ ಸ್ಪಂದಿಸಲೇ ಇಲ್ಲ : ಡಾ.ಜಿ. ಪರಮೇಶ್ವರ್

ದಾವಣಗೆರೆ : ವಾಲ್ಮೀಕಿ ಸಮಾಜದ ಮೀಸಲಾತಿ ಹೆಚ್ಚಳ ಮಾಡುವ ವಿಚಾರದಲ್ಲಿ ಆಗಿನ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಿರೀಕ್ಷಿತ ಪ್ರಮಾಣದಲ್ಲಿ ಸ್ಪಂದಿಸಲಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕುಟುಕಿದರು.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಾಲ್ಮೀಕಿ ಶ್ರೀಗಳು ಅಂದು ಧರಣಿ ಕೂತಾಗ ಮೈತ್ರಿ ಸರ್ಕಾರ ಇತ್ತು. ಆಗಿನ ಸಿಎಂ ಕುಮಾರಸ್ವಾಮಿ ಅವರನ್ನು ಧರಣಿ ಸ್ಥಳಕ್ಕೆ ಹೋಗೋಣ ಬನ್ನಿ ಎಂದು ಕರೆದಿದ್ದೆ. ಆದರೆ, ಅವರು ಬರಲಿಲ್ಲ. ನಾನು ಹೋಗಿ ಭರವಸೆ ಕೊಟ್ಟು ಬಂದಿದ್ದೆ ಎಂದು ಹೇಳಿದರು.

ರಾಮನಿಗೆ ಸಂಬಂಧವಿಲ್ಲದವರಿಗೆ ಏನೇನೋ ಮಾಡ್ತಿದ್ದಾರೆ

ರಾಜ್ಯದಲ್ಲಿ ವಾಲ್ಮೀಕಿ ವಿಶ್ವವಿದ್ಯಾಲಯ ಆಗಲೇಬೇಕು. ವಾಲ್ಮೀಕಿ ಸಮಾಜಕ್ಕೆ ಅಲ್ಲ, ರಾಜ್ಯಕ್ಕೆ ವಾಲ್ಮೀಕಿ ವಿವಿ ಸ್ಥಾಪನೆಗೆ ಬಜೆಟ್​ನಲ್ಲಿ ಘೋಷಣೆ ಮಾಡಬೇಕು. ಸಿಎಂ ಸಿದ್ದರಾಮಯ್ಯ ಈ ಕೆಲಸ ಮಾಡದೇ ಇದ್ರೆ, ಬೇರೆ ಯಾರು ಕೂಡಾ ಮಾಡಲ್ಲ. ರಾಮನಿಗೆ ಸಂಬಂಧವೇ ಇಲ್ಲದವರಿಗೆ ಏನೇನೋ ಮಾಡುತ್ತಿದ್ದಾರೆ. ನಮಗೆ ಸಂಬಂಧ ಇದೆ, ಇದೇ ಕಾರಣಕ್ಕೆ ವಾಲ್ಮೀಕಿ ವಿವಿ ಸ್ಥಾಪನೆ ಆಗಲಿ ಎಂದು ತಿಳಿಸಿದರು.

ವಾಲ್ಮೀಕಿ ಸಮಾಜ ದೇಶದಲ್ಲಿ ದೊಡ್ಡ ಸಮಾಜ

ದೇಶದಲ್ಲಿ ವರ್ಣಾಶ್ರಮ ಪದ್ಧತಿ ಇದೆ. ದೇಶದಲ್ಲಿ ಸಮಾನತೆ ಪ್ರತಿಪಾದನೆ ಮಾಡಿದ್ರು. ಜಾತಿ ವ್ಯವಸ್ಥೆ ಮಾತ್ರ ಜೀವಂತ. ವಾಲ್ಮೀಕಿ ಸಮಾಜ ದೇಶದಲ್ಲಿ ದೊಡ್ಡ ಸಮಾಜವಾಗಿದೆ. ಆಂಧ್ರ ಪ್ರದೇಶ, ಪಂಜಾಬ್ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಲ್ಮೀಕಿ ಸಮಾಜ ಇದೆ ಎಂದು ಡಾ.ಜಿ. ಪರಮೇಶ್ವರ್ ಹೇಳಿದರು.

RELATED ARTICLES

Related Articles

TRENDING ARTICLES