Wednesday, November 20, 2024

ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಮುಖ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವೀರಲೋಕ ಪ್ರಕಾಶನ ಆಯೋಜಿಸಿದ್ದ ಪುಸ್ತಕ ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿಯಾಗಿರುತ್ತದೆ ಎಂದರು.

ನಾವು ನಿತ್ಯ ಪುಸ್ತಕ ಮತ್ತು ಪತ್ರಿಕೆಗಳನ್ನು ಕೊಂಡು ಓದುವ ಅಭಿರುಚಿ ಮತ್ತು ಕಾಳಜಿಯನ್ನು ಬೆಳೆಸಿಕೊಳ್ಳಬೇಕು. ವ್ಯಕ್ತಿತ್ವ ವಿಕಾಶಸನ ಇದರಿಂದ ಅಭಿವೃದ್ಧಿಯಾಗುತ್ತದೆ ಅದರಿಂದ ಎಲ್ಲರಿಗೂ ಪುಸಕ್ತ ಅವಶ್ಯಕ ಎಂದರು.

ಪುಸ್ತಕ ಸಂತೆಯಲ್ಲಿ ಪುಸ್ತಕ ಖರೀದಿಸಿದ ಸಿಎಂ

ಇನ್ನು ಸಿಎಂ ಸಿದ್ದರಾಮಯ್ಯನವರು ಪುಸ್ತಕ ಸಂತೆಯಲ್ಲಿ 7 ಪುಸ್ತಕಗಳನ್ನು ಖರೀದಿಸಿದರು. ಇದೇ ವೇಳೆ ದುಡ್ಡು ಕೊಟ್ಟು ಪುಸ್ತಕ ಖರೀದಿಸಬೇಕಪ್ಪ ಎಂದು ಉಗ್ರಪ್ಪರಿಗೆ ಹೇಳಿದರು. ಒಂದು ಸಾವಿರ ರೂ. ಕೊಟ್ಟು 7 ಪುಸ್ತಕಗಳನ್ನು ಸಿಎಂ ಖರೀದಿಸಿದರು. ಕರ್ನಾಟಕ ರಾಣಿಯರ ಆಡಳಿತ ನೀತಿ, ಮೂಲಭೂತ ಹಕ್ಕುಗಳು, ಸಂಸದೀಯ ಇತಿಹಾಸ, 1897ರ ಸಾಮಾನ್ಯ ಖಂಡಗಳ ಅಧಿನಿಯಮ, ವಕೀಲೆ ಮತ್ತು ಧರ್ಮವೃತ್ತಿ, ಪ್ರಜಾಪ್ರಭುತ್ವ ಮತ್ತು ಚುನಾವಣೆ ಪದ್ದತಿ ಎಂಬ 7 ಪುಸ್ತಕಗಳನ್ನ ಸಿಎಂ ಸಿದ್ದರಾಮಯ್ಯ ಖರೀದಿಸಿದರು.

ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ರಾಮಲಿಂಗಾರೆಡ್ಡಿ, ಲೇಖಕರಾದ ಬರಗೂರು ರಾಮಚಂದ್ರಪ್ಪ, ಮಾಜಿ ಸಂಸದರಾದ ಉಗ್ರಪ್ಪ ಮತ್ತು ಪತ್ರಿಕಾ ಸಂಪಾದಕರಾದ ವಿಶ್ವೇಶ್ವರ ಭಟ್ ಸೇರಿ ಹಲವು ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

 

RELATED ARTICLES

Related Articles

TRENDING ARTICLES