Saturday, December 21, 2024

ರೀಲ್ಸ್ ಮಾಡಿದ ವಿದ್ಯಾರ್ಥಿಗಳ ಅಮಾನತು!

ಗದಗ: ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ MBBS ಇಂಟರ್ನ್‌ಶಿಪ್ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ಮಾಡಿದ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸಂಬಂಧ 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಆದೇಶಿಸಿದ್ದಾರೆ.

ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಎದುರೇ ಚಿತ್ರ ಗೀತೆಗಳಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ರೀಲ್ಸ್‌ ಗಳನ್ನು ನೋಡಿ ಕೆಲವರು ಇಷ್ಟಪಟ್ಟರೆ, ಇನ್ನು ಕೆಲವರು ನಿಮ್ಮ ಹುಚ್ಚಾಟಕ್ಕೆ ಬೇರೆ ಜಾಗ ಸಿಗಲಿಲ್ವಾ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಖಾಸಾಗಿ ಶಾಲೆ ಬಸ್​​​​ಗೆ ಟ್ಯಾಂಕರ್ ಡಿಕ್ಕಿ!: ಶಾಲಾ ಮಕ್ಕಳಿಗೆ ಗಾಯ

ಇಂಟರ್ನ್‌ಶಿಪ್ ವಿದ್ಯಾರ್ಥಿಗಳು ಅನುಮತಿ ಪಡೆಯದೇ ಜಿಲ್ಲಾ ಆಸ್ಪತ್ರೆಯ ವಿವಿಧೆಡೆ ರೀಲ್ಸ್ ಮಾಡಿದ್ದಾರೆ. ಇದರ ಬಗ್ಗೆ ವಿಚಾರಿಸಿದಾಗ, ಏಪ್ರಿಲ್‌ನಲ್ಲಿ ಪದವಿ ಪೂರ್ಣಗೊಳ್ಳುವ ಸಂಭ್ರಮದಲ್ಲಿ ಯಾರಿಗೂ ತೊಂದರೆ ಆಗದಂತೆ ರೀಲ್ಸ್ ಮಾಡಿರುವುದಾಗಿ ತಿಳಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ್ದು ತಪ್ಪು ಗ್ರಾಜ್ಯುಯೇಷನ್ ಡೇ ಮಾಡದಿರಲು ನಿರ್ಧರಿಸಲಾಗಿದೆ ಎಂದು ಗದಗ ಜಿಮ್ಸ್ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ಸ್ಪಷ್ಟನೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES