Sunday, December 22, 2024

ಹೊಸಕೋಟೆಯಲ್ಲಿ ಸರಣಿ ಅಪಘಾತ; ಯುವತಿ ಸಾವು!

ಬೆಂಗಳೂರು ಗ್ರಾಮಾಂತರ : ರಾಷ್ಟ್ರೀಯ ಹೆದ್ದಾರಿ 75ರ ಹೊಸಕೋಟೆ ಪೊಲೀಸ್ ಠಾಣೆಯ ಕೋರ್ಟ್ ಸರ್ಕಲ್ ಬಳಿ ಕ್ಯಾಂಟರ್ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ಬನ್ನೇರುಘಟ್ಟ ಮೂಲದ ಯುವತಿ ಸುಧಾ ಸಾವನ್ನಪ್ಪಿದ ಯುವತಿ. ಕ್ಯಾಂಟರ್ ಡಿಕ್ಕಿಯಿಂದ KSRTC ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ಕೋರ್ಟ್ ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದಾಗ ದುರಂತ ನಡೆದಿದೆ. ಇನ್ನು ಕ್ಯಾಂಟರ್ ಡಿಕ್ಕಿಗೆ ಬೈಕ್ ಸವಾರ ನಜೀರ್ ಖಾನ್​​ ಹಾಗೂ ಕ್ಯಾಂಟರ್ ಚಾಲಕ ಷರೀಫ್​ ಉಲ್ಲಾಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ; ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ: ನಿಖಿಲ್ ಕುಮಾರಸ್ವಾಮಿ

ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಗಾಯಳುಗಳು ದಾಖಲಾಗಿದ್ದಾರೆ. KSRTC ಬಸ್ ಗೆ ಹಿಂಬದಿಯಿಂದ ಡಿಕ್ಕಿಯಾದ ಹಿನ್ನೆಲೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES