Wednesday, January 22, 2025

ಸುತ್ತೂರು ಮಠದ ನಿಸ್ವಾರ್ಥ ಸೇವೆಗೆ ಕೇಂದ್ರ ಸಚಿವ ಅಮಿತ್ ಶಾ ಶ್ಲಾಘನೆ!

ಮೈಸೂರು: ಸುತ್ತೂರು ಮಠವು ನಿಸ್ವಾರ್ಥ ಸೇವೆ ಮೂಲಕ ಲಕ್ಷಾಂತರ ಜನರ ಉಜ್ವಲ ಭವಿಷ್ಯಕ್ಕಾಗಿ ನೆರವಾಗಿದೆ. ಬಿಜೆಪಿ ಈ ಸೇವೆಯನ್ನು ಗುರುತಿಸಿ ವಂದಿಸಲು ಬಯಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.

ಇಂದು ಸುತ್ತೂರು ಜಾತ್ರಾ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅಮಿತ್‌ ಶಾ, ಸುತ್ತೂರು ಶ್ರೀಮಠದಲ್ಲಿ 24 ಮಠಾಧೀಶರು ಇಲ್ಲಿ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಬಸವಣ್ಣ ಕೇವಲ ಒಂದು ವರ್ಗಕ್ಕೆ ಸೀಮಿತರಲ್ಲ. ದೇಶದ ಕೋಟ್ಯಂತರ ಜನರಿಗೆ ಪ್ರೇರಣೆ ತುಂಬಿದ ಮಹಾಪುರುಷರು. ಕರ್ನಾಟಕದ ನೆಲದಲ್ಲಿ ನಿಂತು ಬಸವಣ್ಣನವರನ್ನು ನೆನೆಯುತ್ತೇನೆ. ಬಸವಣ್ಣ ಅವರು ದೇಶಕ್ಕೆ ಭಕ್ತಿ ಭಾವ ತುಂಬಿದವರು ಎಂದು ಬಣ್ಣಿಸಿದರು.

ಇದನ್ನೂ ಓದಿ: ICC Under-19 Worldcup: ಟಾಸ್​ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾಗೆ ಆರಂಭಿಕ ಆಘಾತ

ಸುತ್ತೂರು ಮಠ ಅನ್ನ, ಅಕ್ಷರ ದಾಸೋಹ ನೀಡುತ್ತಿದೆ. ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿ ಅವರಿಂದ ಈಗಿನ ಪೀಠಾಧ್ಯಕ್ಷ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ವರೆಗೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಲಕ್ಷಾಂತರ ಜನರಿಗೆ ಬೆಳಕು ನೀಡಿದ್ದಾರೆ. ಇದಕ್ಕಾಗಿ ಪೀಠಾಧ್ಯಕ್ಷರಿಗೆ ಬಿಜೆಪಿ ಕೃತಜ್ಞತೆ ಸಲ್ಲಿಸುತ್ತದೆ. ನಾನು ನಿನ್ನೆ ಸುತ್ತೂರಿಗೆ ಬರಬೇಕಿತ್ತು. ಇಂದು ಅಹಮದಾಬಾದ್‌ಗೆ ಹೋಗಬೇಕಿತ್ತು. ಆದರೆ, ಅಲ್ಲಿನ ಕಾರ್ಯಕ್ರಮವನ್ನು ರದ್ದು ಮಾಡಿದೆ. ಯಾಕೆ ಅಹಮದಾಬಾದ್‌ಗೆ ಹೋಗುತ್ತಿಲ್ಲ ಎಂದು ಪತ್ರಕರ್ತರು ಕೇಳಿದರು. ನಾನು ಬಿಲ್ಡಿಂಗ್ ಉದ್ಘಾಟಿಸಲು ಹೋಗುತ್ತಿಲ್ಲ. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲು ಹೋಗುತ್ತಿದ್ದೇನೆ ಅಂತ ಹೇಳಿದೆ ಎಂದು ಅಮಿತ್‌ ಶಾ ತಿಳಿಸಿದರು.

ಈ ಸುತ್ತೂರು ಜಾತ್ರೆಯಲ್ಲಿ ಕೊಂಡೋತ್ಸವ, ತೆಪ್ಪೋತ್ಸವ, ರಥೋತ್ಸವ, ಕುಸ್ತಿ, ಸಾಮೂಹಿಕ ವಿವಾಹ ಹೀಗೆ ಎಲ್ಲವೂ ನಡೆಯುತ್ತಿದೆ. ಈ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಕೆ ಆಗುತ್ತಿದೆ. ಶ್ರೀ ಮಠದಲ್ಲಿ 20 ಸಾವಿರ ಶಿಕ್ಷಕರು, ಒಂದು ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ವಿಶೇಷ ಚೇತನರಿಗಾಗಿ ಪಾಲಿಟೆಕ್ನಿಕ್ ಕಾಲೇಜನ್ನೂ ನಡೆಸುತ್ತಿದ್ದಾರೆ ಎಂದು ಅಮಿತ್‌ ಶಾ ಶ್ಲಾಘನೆ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES