ರಾಯಚೂರು : ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ಪುತ್ರ ಸಂತೋಷ ವಿರುದ್ಧ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ತಡೆದ ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರ ಸೇರಿ ಸಂತೋಷ ಹಾಗೂ ಏಳು ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ದೇವದುರ್ಗ ಪೊಲೀಸ್ ಠಾಣೆಯಲ್ಲಿ ನಿಯೋಜಿತರಾಗಿರುವ ಕಾನ್ಸ್ಟೇಬಲ್ ಹನುಮಂತರಾಯ ಅವರು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆದು ವಾಹನ ಮತ್ತು ಚಾಲಕನನ್ನು ತನಿಖೆಗಾಗಿ ಠಾಣೆಗೆ ಕರೆದೊಯ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ಪೊಲೀಸರ ಪ್ರಕಾರ, ಕಾನ್ಸ್ಟೇಬಲ್ ಗೆ ನಂತರ ಶಾಸಕಿಯ ಪುತ್ರ ಸಂತೋಷ್‌ನಿಂದ ಕರೆ ಬಂದಿದ್ದು, ಇನ್‌ಸ್ಪೆಕ್ಷನ್ ಬಂಗಲೆಯಲ್ಲಿ ಸಭೆ ನಡೆಸುವಂತೆ ಸೂಚಿಸಿದ್ದಾರೆ. ಅದರಂತೆ ಕಾನ್ಸ್ಟೇಬಲ್ ಹನುಮಂತರಾಯ ಅವರು ಪ್ರವಾಸಿ ಮಂದಿರ ತಲುಪಿದ ನಂತರ, ಜೆಡಿಎಸ್ ಕಾರ್ಯಕರ್ತರ ಗುಂಪು ಅವರನ್ನು ಥಳಿಸಿದೆ.
ಕಾನ್ಸ್ಟೇಬಲ್ ದೂರಿನ ಮೇಲೆ FIR
ಗಾಯಗೊಂಡ ಕಾನ್ಸ್ಟೇಬಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾನ್ಸ್ಟೇಬಲ್ ನೀಡಿದ ದೂರಿನ ಆಧಾರದ ಮೇಲೆ ಸಂತೋಷ್ ಮತ್ತು ಘಟನೆಯಲ್ಲಿ ಭಾಗಿಯಾಗಿರುವ ಇತರ ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.