Friday, May 3, 2024

ಫೆ.20 ರಿಂದ ಕನ್ನಡದಲ್ಲೇ ನಡೆಯಲಿದೆ ಅರೆಸೇನಾ ಪಡೆಗಳ ಕಾನ್‌ಸ್ಟೆಬಲ್‌ ನೇಮಕಾತಿ ಪರೀಕ್ಷೆ!

ಬೆಂಗಳೂರು: CRPF, BSF ಮತ್ತು CISFನಂತಹ ಅರೆಸೇನಾ ಪಡೆಗಳ ಕಾನ್‌ಸ್ಟೆಬಲ್‌ ನೇಮಕಾತಿ ಪರೀಕ್ಷೆ, ಇದೇ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಯಲಿದೆ. ಫೆಬ್ರವರಿ 20ರಿಂದ ಮಾರ್ಚ್ 7ರವರೆಗೆ ಪರೀಕ್ಷೆಗಳು ನಡೆಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ಇಂದಿನಿಂದ ವಿಧಾನಸಭೆಯ ಬಜೆಟ್ ಅಧಿವೇಶನ: ಫೆ.16ಕ್ಕೆ ಬಜೆಟ್​ ಮಂಡನೆ!

ದೇಶದಾದ್ಯಂತ ಸುಮಾರು 128 ನಗರಗಳಲ್ಲಿ 48 ಲಕ್ಷ ಆಕಾಂಕ್ಷಿಗಳು ಪರೀಕ್ಷೆಗೆ ಹಾಜರಾಗಲಿದ್ದು. ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಕನ್ನಡ, ಅಸ್ಸಾಮಿ, ಗುಜರಾತಿ, ಮಲಯಾಳಂ, ತಮಿಳು, ತೆಲುಗು, ಒಡಿಯ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ. ಇನ್ನು, ಪ್ರಾದೇಶಿಕ ಭಾಷೆಗಳಲ್ಲೂ ಇಂತಹ ನೇಮಕಾತಿ ಪರೀಕ್ಷೆಗಳನ್ನು ನಡೆಸುವುದಾಗಿ ಕಳೆದ ವರ್ಷದ ಏಪ್ರಿಲ್‌ನಲ್ಲಿ ಘೋಷಿಸಲಾಗಿತ್ತು ಎಂದು ತಿಳಿಸಿದೆ.

ಕೇಂದ್ರೀಯ ಪಡೆಗಳಲ್ಲಿ ಸ್ಥಳೀಯ ಯುವಜನರ ಭಾಗವಹಿಸುವಿಕೆ ಹೆಚ್ಚಿಸಬೇಕು ಮತ್ತು ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ನೀಡಬೇಕು ಎಂಬ ಗೃಹ ಸಚಿವ ಅಮಿತ್ ಶಾ ಅವರ ಆಶಯದಿಂದಾಗಿ ಈ ‘ಐತಿಹಾಸಿಕ ನಿರ್ಧಾರ’ ತೆಗೆದುಕೊಳ್ಳಲಾಗಿತ್ತು.

RELATED ARTICLES

Related Articles

TRENDING ARTICLES