ರಾಮನಗರ : ರಾಮನಗರ ಜಿಲ್ಲೆಯನ್ನು ಒಂದು ಮಾಡೆಲ್ (ಮಾದರಿ) ಜಿಲ್ಲೆಯಾಗಿ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ರಾಮನಗರದಲ್ಲಿ ಅಶ್ವಮೇಧ ಕ್ಲಾಸಿಕ್ ನೂತನ ಬಸ್ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಂಸದ ಡಿ.ಕೆ. ಸುರೇಶ್ ಇದಕ್ಕೆ ಸಂಕಲ್ಪ ಮಾಡಿದ್ದಾರೆ. ಅದಕ್ಕೆ ನಾನು, ರಾಮಲಿಂಗಾರೆಡ್ಡಿ, ಸ್ಥಳೀಯ ಶಾಸಕರು ಸೇರಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಹೇಳಿದರು.
ಯಾವ ಯಾವ ಇಲಾಖೆಯಲ್ಲಿ ಏನೇನು ಯೋಜನೆ ಎನ್ನುವುದನ್ನು ಚರ್ಚೆ ಮಾಡುತ್ತೇವೆ. ರಾಮನಗರ ಜಿಲ್ಲೆಯಲ್ಲಿ ರಾಮಲಿಂಗಾರೆಡ್ಡಿ ಮಂತ್ರಿ ಆಗಿದ್ದಾರೆ. 1 ಸಾವಿರ ಅಶ್ವಮೇಧ ಹೊಸ ಬಸ್ ಖರೀದಿ ಮಾಡುತ್ತಿದ್ದೇವೆ. ರಾಮನಗರದ ಐದು ತಾಲೂಕಿಗೆ 100 ಬಸ್ಗಳನ್ನು ಮಂಜೂರು ಮಾಡಿದ್ದೇವೆ. ಸದ್ಯಕ್ಕೆ 25 ಬಸ್ಗಳನ್ನ ನೀಡಿದ್ದೇವೆ ಎಂದರು ತಿಳಿಸಿದರು.
ಹೆಣ್ಣು ಮಕ್ಕಳು ಎಲ್ಲಾ ಕಡೆ ಓಡಾಡುತ್ತಿದ್ದಾರೆ
ಸುಸಜ್ಜಿತ, ಅತ್ಯಾಧುನಿಕ ತಂತ್ರಜ್ಞಾನದ ಬಸ್ಗಳನ್ನ ನಾವು ಕೊಡುತ್ತಿದ್ದೇವೆ. ಎಲ್ಲರೂ ಇದರ ಅನುಕೂಲ ಪಡೆದುಕೊಳ್ಳಬೇಕು. ಇಡೀ ದೇಶದಲ್ಲಿ ನಮ್ಮ ಸರ್ಕಾರದ ರೋಡ್ ಟ್ರಾನ್ಸ್‌ಪೋರ್ಟ್ ಸಿಸ್ಟಮ್ ನಂ.1. ಶಕ್ತಿ ಯೋಜನೆ ಯಶಸ್ವಿಯಾಗಿದೆ. ಸಾರಿಗೆ ಇಲಾಖೆಗೂ ಅಗತ್ಯ ಅನುದಾನ ಕೊಡುತ್ತಿದ್ದೇವೆ. ಹೆಣ್ಣು ಮಕ್ಕಳು ಎಲ್ಲಾ ಕಡೆ ಓಡಾಡುತ್ತಿದ್ದಾರೆ ಎಂದು ಹೇಳಿದರು.