Thursday, December 26, 2024

ರಾಮನಿಗೆ ಅವಹೇಳನ ಮಾಡಿದ ಶಿಕ್ಷಕಿ ಸಸ್ಪೆಂಡ್ ಅಲ್ಲ, ವಜಾ

ಮಂಗಳೂರು : ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ಸಂಬಂಧ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ವಜಾ ಮಾಡಿದೆ.

ದೇವರಿಗೆ ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ವಜಾ ಮಾಡಿದ್ದಾಗಿ ತಿಳಿಸಿದ್ದಾರೆ.

ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆಯ ಕಿಚ್ಚು ಜೋರಾಗಿದೆ. ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾವಣೆಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಹಿಂದು ಧರ್ಮದ ಬಗ್ಗೆ ಅಹೇಳನಕಾರಿ ಬೋಧನೆ ಮಾಡಿದ ಶಿಕ್ಷಕಿ ವಿರುದ್ದ ಪ್ರತಿಭಟನೆ!

ಹಿಂದೂ ವಿದ್ಯಾರ್ಥಿಗಳ ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಈ ವೇಳೆ ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ಪೊಲೀಸರು ತಡೆದಿದ್ದಾರೆ.

RELATED ARTICLES

Related Articles

TRENDING ARTICLES