ಉಡುಪಿ: ಸರ್ಕಾರದ ನಿಯಂತ್ರಣದಲ್ಲಿರುವ ದೇವಸ್ಥಾನಗಳನ್ನು ಮುಕ್ತಿಗೊಳಿಸಿ ಅವುಗಳ ರಕ್ಷಣೆಗೆ ಸಂಘಟಿತರಾಗುವ ದೃಷ್ಟಿಯಿಂದ ಚರ್ಚಿಸಲು ಉಡುಪಿ ಜಿಲ್ಲಾ ಮಟ್ಟದ ದೇವಸ್ಥಾನಗಳ ಪ್ರಮುಖರ ಸಮಾವೇಶ ನಡೆಯಿತು.
ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಈ ಸಮಾವೇಶವನ್ನು ಉದ್ಘಾಟಿಸಿದರು. ಕೇವಲ ದೇವಸ್ಥಾನಗಳನ್ನು ಕಟ್ಟಿದರೆ ಸಾಲದು, ಅವುಗಳನ್ನು ಉಳಿಸುವ ಕೆಲಸವಾಗಬೇಕು. ಈ ಮೂಲಕ ನಮ್ಮ ಸಂಸ್ಕೃತಿಯ ರಕ್ಷಣೆ ಆಗಬೇಕು ಎಂದು ಸ್ವಾಮೀಜಿ ಹೇಳಿದರು.
ಇದನ್ನೂ ಓದಿ: ‘ದಿಲ್ಲಿ ಚಲೋ’ ಹೋರಾಟ; ದೆಹಲಿಯಲ್ಲಿ 1 ತಿಂಗಳು ನಿಷೇಧಾಜ್ಞೆ!
ನಮಗೆ ಸ್ವಾತಂತ್ರ್ಯ ಸಿಕ್ಕಿದರೂ ನಮ್ಮ ದೇವಸ್ಥಾನಗಳಿಗೆ ಸ್ವಾತಂತ್ರ್ಯ ಲಭಿಸಿಲ್ಲ. ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣಗಳಿಂದ ಮುಕ್ತಿಗೊಳಿಸಲು ನಾವೆಲ್ಲ ಸಂಘಟಿತರಾಗಬೇಕು. ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲಿಯೂ ಸಮಾವೇಶ ನಡೆಸಲಾಗುವುದು ಎಂದು ಹೇಳಿದರು.