Wednesday, October 30, 2024

ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಲು ಅವಕಾಶವಿಲ್ಲ: ರಾಜ್ಯ ಸರ್ಕಾರ

ಬೆಂಗಳೂರು: ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪ ಇಟ್ಟಿದ್ದಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದೆ.

ಹೌದು, ಅತಿಥಿ ಉಪನ್ಯಾಸಕರ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಬಜೆಟ್ ಅಧಿವೇಶನದ ವೇಳೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ವಿಧಾನ ಪರಿಷತ್‌ ಸದಸ್ಯ ಅ. ದೇವೇಗೌಡ ಅವರು ನಿಯಮ 72ರ ಅಡಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಗಮನ ಸೆಳೆಯುವ ಸೂಚನೆಯನ್ನು ಮಂಡಿಸಿದರು. ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಸುಧಾಕರ್, ಖಾಲಿ ಹುದ್ದೆಗೆ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರು ಸದನಕ್ಕೆ ಉತ್ತರ ನೀಡಿದರು.

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಬಗ್ಗೆ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಸಮಿತಿಯ ವರದಿಯ ಪ್ರಕಾರ ಪರಿಶೀಲನೆ ಮಾಡಲಾಗಿದೆ. ವಿವಿಧ ಮಾನದಂಡದ ಆಧಾರದ ಮೇಲೆ ವೇತನ ನಿಗದಿ ಮಾಡಲಾಗಿದೆ. 32 ಸಾವಿರದಿಂದ 26 ಸಾವಿರದವರೆಗೂ ವೇತನ ನೀಡಲಾಗುತ್ತಿದೆ. ಆನ್‌ಲೈನ್ ಕೌನ್ಸೆಲಿಂಗ್ ಮೂಲಕ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಅತಿಥಿ ಉಪನ್ಯಾಸಕರನ್ನು ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಸಾಧ್ಯವಿಲ್ಲ. ಬದಲಾಗಿ ಕಾಲೇಜುಗಳಲ್ಲಿ ಹೆಚ್ಚುವರಿ ಅವಧಿಗೆ ಶೈಕ್ಷಣಿಕ ವರ್ಷಕ್ಕೆ ಸೀಮಿತವಾಗಿ ತಾತ್ಕಾಲಿಕ ನೇಮಕ ಮಾಡಿಕೊಳ್ಳುತ್ತಿರುವುದಾಗಿ ಸ್ಪಷ್ಟನೆ ನೀಡಿದರು.

RELATED ARTICLES

Related Articles

TRENDING ARTICLES