Saturday, July 27, 2024

ಭಾರತದ ಹಿರಿಯ ಕ್ರಿಕೆಟಿಗ ದತ್ತಾಜಿರಾವ್ ಗಾಯಕ್ವಾಡ್ ನಿಧನ

ಬೆಂಗಳೂರು : ಭಾರತದ ಅತ್ಯಂತ ಹಿರಿಯ ಕ್ರಿಕೆಟಿಗ ಹಾಗೂ ಮಾಜಿ ನಾಯಕ ದತ್ತಾಜಿರಾವ್ ಗಾಯಕ್ವಾಡ್ ವಯೋಸಹಜ ಕಾಯಿಲೆಯಿಂದ ಇಹಲೋಕ ತ್ಯಜಿಸಿದರು.

ಇವರಿಗೆ 95 ವರ್ಷ ವಯಸ್ಸಾಗಿತ್ತು. ಕಳೆದ 12 ದಿನಗಳಿಂದ ಬರೋಡಾ ಆಸ್ಪತ್ರೆಯ ಐಸಿಯುನಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

1952 ಮತ್ತು 1961ರ ನಡುವೆ ಅವರು ಭಾರತದ ಪರ 11 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. 1959ರಲ್ಲಿ ಇಂಗ್ಲೆಂಡ್ ಪ್ರವಾಸದ ಸಂದರ್ಭದಲ್ಲಿ ರಾಷ್ಟ್ರೀಯ ತಂಡದ ನಾಯಕರಾಗಿದ್ದರು. ಬಲಗೈ ಬ್ಯಾಟರ್ ಗಾಯಕ್ವಾಡ್ ಅವರು 1952ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಕ್ರಿಕೆಟ್​​ಗೆ ಪದಾರ್ಪಣೆ ಮಾಡಿದ್ದರು.

14 ಶತಕಗಳೊಂದಿಗೆ 3,139 ರನ್

ರಣಜಿ ಟ್ರೋಫಿಯಲ್ಲಿ 14 ಶತಕಗಳೊಂದಿಗೆ 3,139 ರನ್​ ಗಳಿಸಿದ್ದಾರೆ. ಅವರ ಮಗ ಅಂಶುಮಾನ್ ಗಾಯಕ್ವಾಡ್ ಕೂಡ ಭಾರತದ ಪರ ಕ್ರಿಕೆಟ್ ಆಡಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ಓಪನರ್ ಮತ್ತು ರಾಷ್ಟ್ರೀಯ ತಂಡದ ಮಾಜಿ ಕೋಚ್ ಆಗಿ ಅಂಶುಮಾನ್ ಗಾಯಕ್ವಾಡ್ ಸೇವೆ ಸಲ್ಲಿಸಿದ್ದಾರೆ.

RELATED ARTICLES

Related Articles

TRENDING ARTICLES