Sunday, February 25, 2024

ಲೋಕಸಭಾ ಚುನಾವಣೆ: ಖರ್ಗೆಗೆ ಶಾಮನೂರು ಶಿವಶಂಕರಪ್ಪ ಪತ್ರ ಬಾಂಬ್​!

ಬೆಂಗಳೂರು: ರಾಜ್ಯಸಭೆ,ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಟಿಕೆಟ್​ಗಾಗಿ ಕಾಂಗ್ರೆಸ್​ನಲ್ಲಿ ಲಾಭಿಗಳು ಆರಂಭಗೊಂಡಿವೆ. ಈ ನಡುವೆ, ಮುಂಬರುವ ಎರಡು ಚುನಾವಣೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಒತ್ತಡ ಬಂದಿದೆ.

ಇದನ್ನೂ ಓದಿ: ಟಿಕೆಟ್​ ರಹಿತ ಪ್ರಯಾಣಿಕರಿಂದ ಭಾರಿ ದಂಡ ವಸೂಲಿ!

ಈ ಸಂಬಂಧ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ವೀರಶೈವ ಲಿಂಗಾಯತ ಸಮುದಾಯದವರಿಗೆ ನೀಡಬೇಕು. ಲೋಕಸಭೆ ಚುನಾವಣೆಯಲ್ಲಿ ಸಮುದಾಯದ ಜನಸಂಖ್ಯೆ ಅನುಗುಣವಾಗಿ ವೀರಶೈವ ಲಿಂಗಾಯತರಿಗೆ ಆಧ್ಯತೆ ನೀಡಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

RELATED ARTICLES

Related Articles

TRENDING ARTICLES