Thursday, January 23, 2025

ನಿಯಂತ್ರಣ ತಪ್ಪಿ ದೇವಸ್ಥಾನಕ್ಕೆ ಗುದ್ದಿದ ಕೋಲಾರ DySP ಜೀಪ್

ರಾಮನಗರ : ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನಕ್ಕೆ ಪೊಲೀಸ್ ಜೀಪ್ ಡಿಕ್ಕಿ ಹೊಡೆದಿರುವ ಘಟನೆ ರಾಮನಗರ ಜಿಲ್ಲೆಯ ಬಸವನಪುರ ಗ್ರಾಮದ ಬಳಿ ನಡೆದಿದೆ.

ಕೋಲಾರ DySP ರಮೇಶ್ ರವರು ಸಂಚರಿಸುತ್ತಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ರಾಮದೇವರ ದೇವಸ್ಥಾನಕ್ಕೆ ಗುದ್ದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕ್ರೇನ್ ಮೂಲಕ ಬುಲೋರೊ ಜೀಪ್​ನ್ನು ಪೊಲೀಸರು ಹೊರತೆಗೆದಿದ್ದಾರೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.

ಬೈಕ್ ಸವಾರರ ಮೇಲೆಯೇ ಬಿದ್ದ ಮರ

ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಹೆದ್ದಾರಿ ಪಕ್ಕದ ಬೃಹತ್​​ ಮರದ ಕೊಂಬೆ ಬಿದ್ದ ಘಟನೆ ಶಿವಮೊಗ್ಗದ ಗೊಂದಿ ಚಟ್ನಹಳ್ಳಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಅದೃಷ್ಟವಶಾತ್​ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೈಕ್ ಓಡಿಸುತ್ತಿದ್ದ ಮಾವ ಮಹಮ್ಮದ್ ಶಫಿ, ಬೈಕ್ ಹಿಂಬದಿಯಲ್ಲಿದ್ದ ಸೊಸೆ ಮತ್ತು ಮೊಮ್ಮಗಳಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಭಯಾನಕ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

RELATED ARTICLES

Related Articles

TRENDING ARTICLES